ಬ್ರೇಕಿಂಗ್ ನ್ಯೂಸ್
01-10-23 06:17 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ತಮ್ಮ ಮನೋಜ್ಞ ಅಭಿನಯ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ಬೆಂಗಳೂರಿನಲ್ಲಿ ನಟ ನಾಗಭೂಷಣ್ ಕಾರು ಕನಕಪುರ ರಸ್ತೆಯ ವಸಂತಪುರ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಆಪಘಾತವಾಗಿದ್ದು, ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ 48 ವರ್ಷದ ಪ್ರೇಮಾ ಎಂಬ ಮಹಿಳೆ ಮೃತಪಟ್ಟರೆ, ಅವರ ಪತಿ ಗಂಭೀರ ಗಾಯಗೊಂಡಿದ್ದಾರೆ. ಉತ್ತರ ಹಳ್ಳಿಯ ಕೆ ಎಸ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ತನಿಖೆ ನಡೆಯುತ್ತಿದೆ.
ಖಾಸಗಿ ವಾಹಿನಿಯ ಕಾರ್ಯಕ್ರಮ ಮುಗಿಸಿ ಬರುವ ವೇಳೆ ನಾಗಭೂಷಣ ಅವರು ಕಾರು ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ನಾಗಭೂಷಣ ಅವರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ ಮೃತಪಟ್ಟಿದ್ದಾರೆ.
ನಾಗಭೂಷಣ್ ಅವರು ಕಳೆದ ರಾತ್ರಿ ಕಾರನ್ನು ವೇಗವಾಗಿ ಚಾಲನೆ ಮಾಡಿಕೊಂಡುಬಂದು ಫುಟ್ಪಾತ್ನಲ್ಲಿ ನಡೆದುಹೋಗುತ್ತಿದ್ದ ಕೃಷ್ಣ ಬಿ (58) ಮತ್ತು ಅವರ ಪತ್ನಿ ಎಸ್ ಪ್ರೇಮ ಅವರಿಗೆ ಡಿಕ್ಕಿ ಹೊಡೆದಿದೆ. ಫುಟ್ ಪಾತ್ಗೆ ಬಂದ ಕಾರು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪ್ರೇಮ ಅವರ ಮುಖ, ತಲೆಗೆ ಗಾಯವಾಗಿ ತೀವ್ರ ರಕ್ತಸ್ತ್ರಾವ ಮೂಗು ಹಾಗೂ ಬಾಯಿಯಿಂದ ರಕ್ತಬಂದು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಕನ್ನಡದಲ್ಲಿ ಹಿಟ್ ಆಗಿರುವ ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಾಗಭೂಷಣ್ ನಟಿಸಿ ಜನಮೆಚ್ಚುಗೆ ಗಳಿಸಿದ್ದರು.
Kannada film star Nagabhushana NS' car that was involved in the deadly accident on Vasanthapura Main Road late on Saturday night.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am