ಬ್ರೇಕಿಂಗ್ ನ್ಯೂಸ್
04-10-23 11:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.4: ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿ ಕೃತ್ಯ ನಡೆಸುತ್ತಾರೆ. ಈ ರೀತಿ ಗಲಾಟೆ ಮಾಡಿಸುವುದು ಬಿಜೆಪಿಯವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಬಿಜೆಪಿಯವರು ಕಿತಾಪತಿ ಮಾಡಿ ಕಿತ್ತಾಟ ತಂದಿಡುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ಕೋಮುಗಲುಭೆ ಮಾಡಿಸುವುದು, ಜಗಳ ಮಾಡಿಸುವುದು ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವುದು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ. ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್‍ಗಿರಿ, ಗಲಾಟೆ ಮಾಡುವುದು ಹೊಡೆಯುವುದು ಮಾಡಿಕೊಂಡು ಬಂದಿದ್ದರು. ಇದಕ್ಕೆಲ್ಲ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕೆಲಸ ಮಾಡಿದ್ದಾರೆ. ರಕ್ತದಲ್ಲೇ ಅವರಿಗೆ ಇದೆಲ್ಲ ಬಂದು ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದರು.
ಹೇಳಿಕೆ ವಿವಾದ ಸ್ವರೂಪ ಪಡೆಯುತ್ತಲೇ ತಾನು ಆ ಅರ್ಥದಲ್ಲಿ ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಶಿವಮೊಗ್ಗದಲ್ಲಿ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ. ಬಿಜೆಪಿಯವರು ಜನರಲ್ ಆಗಿ ಯಾವ ರೀತಿ ಮಾಡ್ತಾರೆ ಅಂತ ಹೇಳಿದ್ದೆ ಅಷ್ಟೇ. ಅವರು ಸಾಮಾನ್ಯವಾಗಿ ಆ ರೀತಿ ಮಾಡ್ತಾರೆ ಎಂದಿದ್ದೇನೆ. ಬಿಜೆಪಿ ವೇಷ ಮರೆಸಿ ಮಾಡುತ್ತೆ ಅಂದಿದ್ದು ಹಳೆಯ ಘಟನೆಗಳ ಬಗ್ಗೆ. ಶಿವಮೊಗ್ಗ ಮತ್ತು ನನ್ನ ಹೇಳಿಕೆಗೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
The BJP disguises itself and indulges in malpractices. Minister Ramalinga Reddy accused it of inciting communal riots. Bjp leaders reacted sharply to the minister's remarks, saying Ramalinga Reddy had made this politically motivated statement to cover up the government's failure.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am