ಬ್ರೇಕಿಂಗ್ ನ್ಯೂಸ್
07-10-23 09:28 pm Bangalore Correspondent ಕರ್ನಾಟಕ
ಬೆಂಗಳೂರು, ಅ.7: ತಮಿಳುನಾಡಿನಿಂದ ಲಾರಿಯಲ್ಲಿ ತಂದಿದ್ದ ಪಟಾಕಿಯನ್ನು ಇಳಿಸುತ್ತಿದ್ದಾಗ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದ್ದು, 12 ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿ 25ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು.
ಮಧ್ಯಾಹ್ನ 3.30ರ ಸುಮಾರಿಗೆ ಘಟನೆ ನಡೆದಿದ್ದು, ನಾಲ್ಕೈದು ಗಂಟೆ ಕಳೆದರೂ ರಾತ್ರಿ ವರೆಗೂ ಸ್ಥಳದಲ್ಲಿ ಉರಿಯುತ್ತಲೇ ಇತ್ತು. ಬೆಂಕಿ ನಂದಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಲ್ಲಿದ್ದ ಮೃತದೇಹಗಳು ಪೂರ್ತಿ ಸುಟ್ಟು ಹೋಗಿದ್ದು ಗುರುತು ಸಿಗದಂತಾಗಿದೆ. ಪಟಾಕಿ ಮಳಿಗೆಯಲ್ಲಿ 5 ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನಿತ್ತು ಎನ್ನಲಾಗಿದೆ. ದಾಸ್ತಾನು ಮಳಿಗೆ, ಪಟಾಕಿಯಿದ್ದ ಒಂದು ಲಾರಿ, ಮತ್ತೊಂದು ಸರಕು ಸಾಗಣೆಯ ಲಾರಿ, ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಹೋಗಿವೆ. ಸ್ಥಳದಲ್ಲಿ ಎಷ್ಟು ಮಂದಿ ಇದ್ದರು ಅನ್ನುವ ನಿಖರ ಮಾಹಿತಿಯಿಲ್ಲ. ಹಲವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸಂಜೆ ಹೊತ್ತಿಗೆ ಭಾರೀ ಪ್ರಮಾಣದಲ್ಲಿ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿದ್ದರಿಂದ ಅತ್ತಿಬೆಲೆ ಪರಿಸರದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಅಲ್ಲಿಂದ ತಮಿಳುನಾಡಿನ ಹೊಸೂರು ಭಾಗಕ್ಕೆ ಹೆದ್ದಾರಿಯೇ ನಾಲ್ಕು ಗಂಟೆ ಕಾಲ ಬಂದ್ ಆಗಿತ್ತು. ಎರಡು ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದರೆ, ಏನೋ ಸ್ಫೋಟ ಆಗಿದೆಯೆಂದು ಜನರು ಗಾಬರಿಯಿಂದ ನಿಂತು ನೋಡುತ್ತಿದ್ದರು. ಜನರನ್ನು ಸಂಭಾಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
A major fire broke out at a firecracker shop at Attibele in Anekal taluk while unloading the firecrackers from a goods vehicle on Saturday. As a result of the fire, 4-5 adjacent shops and some vehicles, including a truck, were burnt.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am