ಬ್ರೇಕಿಂಗ್ ನ್ಯೂಸ್
17-10-23 02:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಖಾಲಿ ಮನೆಗಳ ಬಗ್ಗೆ ಕಳ್ಳರಿಗೆ ಮಾಹಿತಿ ಕೊಟ್ಟು ಪೊಲೀಸ್ ಸಿಬಂದಿಯೇ ಮನೆಗಳ್ಳತನ ಮಾಡಿಸುತ್ತಿದ್ದ ಕೃತ್ಯವನ್ನು ಜ್ಞಾನಭಾರತಿ ಪೊಲೀಸರು ಪತ್ತೆ ಮಾಡಿದ್ದು ಪ್ರಕರಣ ಸಂಬಂಧ ಪೊಲೀಸ್ ಕಾನ್ ಸ್ಟೇಬಲ್ ಒಬ್ಬಾತನನ್ನು ಬಂಧಿಸಿದ್ದಾರೆ.
ಕುಖ್ಯಾತ ಆರೋಪಿಗಳ ಜೊತೆ ಸೇರಿ ಮನೆಗಳ್ಳತನ ಮಾಡಿಸುತ್ತಿದ್ದ ಆರೋಪದಲ್ಲಿ ದೇವನಹಳ್ಳಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಯಲ್ಲಪ್ಪ ಬಂಧನಕ್ಕೀಡಾಗಿದ್ದಾನೆ. ಚಂದ್ರಾಲೇ ಔಟ್, ಚಿಕ್ಕಜಾಲ, ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಗಳ್ಳತನ ಪ್ರಕರಣಗಳಲ್ಲಿ ಪೇದೆ ಯಲ್ಲಪ್ಪ ಕೈವಾಡ ಇರುವುದು ಪತ್ತೆಯಾಗಿತ್ತು. ಖಾಲಿ ಮನೆಗಳು, ಒಂಟಿಯಾಗಿ ವಾಸವಿರುವ ವ್ಯಕ್ತಿಗಳ ಬಗ್ಗೆ ಕಳ್ಳರಿಗೆ ಮಾಹಿತಿ ನೀಡಿ ಅವರಿಂದಲೇ ಕಳವು ಕೃತ್ಯ ಮಾಡಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಕಳವುಗೈದ ಸೊತ್ತಿನಲ್ಲಿ ಪಾಲು ತೆಗೆದುಕೊಳ್ಳುತ್ತಿದ್ದ.
ಇತ್ತೀಚೆಗಷ್ಟೇ ದೇವನಹಳ್ಳಿ ಠಾಣೆಗೆ ವರ್ಗಾವಣೆಗೊಂಡಿದ್ದ ಕಾನ್ಸ್ಟೇಬಲ್ ಯಲ್ಲಪ್ಪನ ಬಗ್ಗೆ ಪೊಲೀಸ್ ತನಿಖೆಯಲ್ಲಿ ಶಂಕೆ ಕಂಡುಬಂದಿತ್ತು. ಕಳವು ಪ್ರಕರಣದ ಆರೋಪಿಗಳ ತನಿಖೆಯ ವೇಳೆ ಯಲ್ಲಪ್ಪನ ಜೊತೆಗೆ ಸಂಪರ್ಕ ಇರುವುದು ತಿಳಿದ ಜ್ಞಾನಭಾರತಿ ಪೊಲೀಸರು ಪೊಲೀಸ್ ಕಾನ್ ಸ್ಟೇಬಲ್ ನನ್ನು ಬಂಧಿಸಿದ್ದಾರೆ.
Police constable Yalappa from Devanahalli police station arrested in Bangalore for involving with robbers to rob houses in city. Three cases of robbery was registered at Jnanabharathi Police Station limits.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm