ಬ್ರೇಕಿಂಗ್ ನ್ಯೂಸ್
18-10-23 01:03 pm HK News Desk ಕರ್ನಾಟಕ
ವಿಜಯಪುರ, ಅ.18: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಯುವಕರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ.
ಮೃತ ಯುವಕರನ್ನು ವಿಜಯಪುರ ವಜ್ರಹನುಮಾನ ನಗರದ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ (26) ಮತ್ತು ಪ್ರವೀಣ ಪಾಟೀಲ್ (30) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ನಾಲ್ವರು ಸ್ನೇಹಿತರು ಸೇರಿ ಊಟಕ್ಕೆ ಹೊರಗಡೆ ಹೋಗಿದ್ದಾರೆ. ಊಟ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಟೋಲ್ಗೇಟ್ ಹತ್ತಿರದ ಟ್ರಕ್ ಬೇ ಬಳಿ ಇರುವ ಡಿವೈಡರ್ ಮೇಲೆ ಯುವಕರು ಕುಳಿತಿದ್ದರು. ಈ ವೇಳೆ ಜವರಾಯನ ರೂಪದಲ್ಲಿ ಬಂದ ಲಾರಿ ಯುವಕರ ಮೇಲೆ ಹರಿದಿದೆ. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಕರೆ ಮಾಡಿ ತೀವ್ರವಾಗಿ ಗಾಯಗೊಂಡ ಯುವಕರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ಮುಂದಾಗಿದ್ದರು. ಆದ್ರೆ ಯುವಕರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಇನ್ನು, ಈ ಘಟನೆಯಲ್ಲಿ ಯುವಕರಿಗೆ ಸೇರಿದ ಬೈಕ್ಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.
ಸುದ್ದಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಿರಿಮಲ್ಲ ತಳಕಟ್ಟಿ ಸೇರಿದಂತೆ ಮೊದಲಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪ್ರೆಗೆ ರವಾನಿಸಿದರು. ಬದುಕಿ ಬಾಳಿ ಸುಂದರ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ನಾಲ್ವರು ಸ್ನೇಹಿತರು ದಾರುಣ ಅಂತ್ಯ ಕಂಡಿರುವುದರಿಂದ ಕುಟುಂಬಸ್ಥರು ಮತ್ತು ಸಂಬಂಧಿಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
In a tragic incident, four persons were killed on the spot when a speeding truck ran over them near a toll gate in Vijayapura district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am