ಬ್ರೇಕಿಂಗ್ ನ್ಯೂಸ್
18-10-23 05:07 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಬುಧವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ ಆಗಿದೆ.
ತಮಿಳುನಾಡಿನ ವಾಯಂಬಾಡಿ ಮೂಲದ ರಾಜೇಶ್ ಮೃತ ಯುವಕ.
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ರಾಜೇಶ್ ಕೂಲಿ ಕೆಲಸಕ್ಕಾಗಿ ಬಂದಿದ್ದರು.
ಅಕ್ಟೊಬರ್ 7ರಂದು ಮಧ್ಯಾಹ್ನ 3.30ಕ್ಕೆ ಲಾರಿಯಿಂದ ಗೋದಾಮಿಗೆ ಪಟಾಕಿ ಇಳಿಸುವಾಗ ದುರಂತ ಸಂಭವಿಸಿತ್ತು.
ಅದೇ ದಿನ 13 ಶವಗಳನ್ನು ಹೊರ ತೆಗೆಯಲಾಗಿತ್ತು.
ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಪಟ್ಟಂತೆ ಮ್ಯಾಜಿಸ್ಟ್ರಿಯಲ್ ತನಿಖೆ ನಡೆಸಲು ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್ ಆದಿತ್ಯ ಬಿಸ್ವಾಸ್ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಲಾಗಿದ್ದು, ವಿಚಾರಣೆ ನಡೆಸಿ ವರದಿ ಸಲ್ಲಿಸಲು ಮೂರು ತಿಂಗಳ ಗಡುವು ನಿಗದಿಪಡಿಸಲಾಗಿದೆ.
ಕರ್ನಾಟಕ– ತಮಿಳುನಾಡು ಗಡಿಯಲ್ಲಿರುವ ಅತ್ತಿಬೆಲೆಯ ಶ್ರೀ ಬಾಲಾಜಿ ಟ್ರೇಡರ್ಸ್ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 16 ಮಂದಿ ಮೃತಪಟ್ಟಿದ್ದರು. ಈ ಬಗ್ಗೆ ಅತ್ತಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಅಲೋಕ್ ಮೋಹನ್ ವರದಿಯೊಂದನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದರು. ವರದಿ ಪರಿಶೀಲನೆ ನಡೆಸಿರುವ ಸರ್ಕಾರ, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ.
‘ಪಟಾಕಿ ಅವಘಡಕ್ಕೆ ಕಾರಣವೇನು? ಪಟಾಕಿ ಮಳಿಗೆಗೆ ಅನುಮತಿ ಪಡೆಯಲಾಗಿತ್ತಾ? ಮಾಲೀಕರಿಂದ ಯಾವೆಲ್ಲ ದಾಖಲೆ ಪಡೆದು ಪರವಾನಗಿ ನೀಡಲಾಗಿತ್ತು ? ಪರವಾನಗಿ ನೀಡುವಲ್ಲಿ ಲೋಪವಾಗಿದೆಯಾ ? ಲೋಪವೆಸಗಿದವರು ಯಾರು ? ಅವಘಡ ಆಕಸ್ಮಿಕವೋ ಅಥವಾ ನಿರ್ಲಕ್ಷ್ಯದಿಂದ ಆಗಿದೆಯಾ ? ನಷ್ಟ ಎಷ್ಟಾಗಿದೆ ? ಎಂಬ ಬಗ್ಗೆ ಪಟಾಕಿ ದಾಸ್ತಾನು ಮಳಿಗೆಗಳ ಸ್ಫೋಟಕ ಕಾಯ್ದೆಯನ್ವಯ ವಿಚಾರಣೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
The death toll in the Attibele firecracker blaze rose to 17 on Wednesday after another victim passed away early in the morning.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am