ಬ್ರೇಕಿಂಗ್ ನ್ಯೂಸ್
12-11-20 01:52 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 12: ರಾಜ್ಯದಲ್ಲಿ 9ರಿಂದ 12ನೇ ತರಗತಿ ವರೆಗಿನ ಮಕ್ಕಳಿಗೆ ಡಿಸೆಂಬರ್ ತಿಂಗಳಲ್ಲಿಯೇ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ. ಮಾಹಿತಿ ಪ್ರಕಾರ, ಡಿಸೆಂಬರ್ 15ರಿಂದ 9ರಿಂದ 12ನೇ ತರಗತಿ ಮಕ್ಕಳ ಶಾಲೆ, ಕಾಲೇಜುಗಳು ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ರಾಜ್ಯ ಸರಕಾರ ದೀಪಾವಳಿ ಬಳಿಕ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಈಗಾಗ್ಲೇ ಸರಣಿ ಸಭೆಗಳ ಮೂಲಕ ಖಾಸಗಿ ಶಾಲೆಗಳ ಮುಖ್ಯಸ್ಥರು ಮತ್ತು ಪೋಷಕರಿಂದ ಮಾಹಿತಿ ಸಂಗ್ರಹಿಸಿದ್ದು, ವರದಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ. ಬುಧವಾರ ಆರ್ ಟಿಇ ಸ್ಟೂಡೆಂಟ್ಸ್ ಮತ್ತು ಪೇರೆಂಟ್ಸ್ ಅಸೋಸಿಯೇಶನ್ ಹಾಗೂ ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ. ಹೆಚ್ಚಿನ ಪಾಲಕರು ಮತ್ತು ಶಾಲಾ ಮುಖ್ಯಸ್ಥರು 9ರಿಂದ 12ರ ತಗತಿಗೆ ಶಾಲೆ ಆರಂಭಿಸಲು ಒಪ್ಪಿಗೆ ಸೂಚಿಸಿದ್ದಾರೆ. ಡಿ.15ರ ಬಳಿಕ ಶಾಲೆ ಆರಂಭಿಸಬಹುದು. ಆದರೆ, ಪಠ್ಯೇತರ ಚಟುವಟಿಕೆ ನಡೆಸಬಾರದು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಕೆ ಕೊರೊನಾ ಕೃಪಾಂಕ ನೀಡಬೇಕು. ವಿದ್ಯಾರ್ಥಿಗಳ ಪಾಲಕರಿಂದ ಮುಚ್ಚಳಿಕೆ ಬರೆಸಿಕೊಳ್ಳಬೇಕು ಎಂದು ಆರ್ ಟಿಇ ವಿದ್ಯಾರ್ಥಿಗಳ ಪೋಷಕರು ಒತ್ತಾಯಿಸಿದ್ದಾರೆ.


ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಬೇಕು. ಶಾಲಾರಂಭದ 15 ದಿನಗಳ ಮುಂಚಿತವಾಗೇ ಶಾಲೆಗಳನ್ನು ಶುಚಿಗೊಳಿಸಬೇಕು. ಅದರ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ಒತ್ತಾಯಿಸಿದ್ದಾರೆ. ಈ ಎಲ್ಲ ವರದಿಗಳನ್ನು ಕ್ರೋಡೀಕರಿಸಿ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಸಚಿವರಿಗೆ ಸಲ್ಲಿಸಲಿದ್ದಾರೆ. ಸದ್ಯ ಸಚಿವರು ಮತ್ತು ಶಿಕ್ಷಣ ಇಲಾಖೆ ಆಯುಕ್ತರು ಹೊರ ಜಿಲ್ಲೆಗಳಲ್ಲಿ ಪ್ರವಾಸದಲ್ಲಿದ್ದು ಕಚೇರಿಗೆ ಆಗಮಿಸಿದ ಬಳಿಕವೇ ಈ ಬಗ್ಗೆ ನಿರ್ಧರಿಸಿ ಸಿಎಂ ಯಡಿಯೂರಪ್ಪ ಮೂಲಕ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Classes 9 to 12 in Karnataka to open from December 2020 says Education Minister Office Circular. Guidelines to be issued shortly.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am