ಬ್ರೇಕಿಂಗ್ ನ್ಯೂಸ್
25-10-23 06:06 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.25: ಧಾರವಾಡ ಜಿಲ್ಲೆಯ ರಾಯಾಪುರ ಬಡಾವಣೆಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ (SKDRDP) ಕಚೇರಿಯ ಲಾಕರ್ ಅನ್ನೇ ಕಳ್ಳರು ಲೂಟಿ ಮಾಡಿದ್ದು 1 ಕೋಟಿ 24 ಲಕ್ಷ ರೂ. ಹಣ ಎಗರಿಸಿದ್ದಾರೆ.
ಸಂಘದ ಕಚೇರಿಯಲ್ಲಿರುವ ಒಟ್ಟು ನಾಲ್ಕು ಲಾಕರ್ ಗಳನ್ನು ಮುರಿದಿರುವ ಕಳ್ಳರು, ಅಲ್ಲಿದ್ದ ಎಲ್ಲ ಹಣವನ್ನೂ ಬಿಡದೆ ಕದ್ದುಕೊಂಡು ಹೋಗಿದ್ದಾರೆ. ಸೆಕ್ಯೂರಿಟಿ ಗಾರ್ಡ್‍ಗಳು ಊಟಕ್ಕೆ ಹೋಗಿದ್ದ ಸಮಯದಲ್ಲಿ ಕಚೇರಿಯ ಶೌಚಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಕೃತ್ಯ ಎಸಗಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ಇಲ್ಲದ ಭಾಗದಿಂದ ಬಂದು ಕಳ್ಳತನ ಮಾಡಿರೋದು ಹಲವು ಅನುಮಾನ ಮೂಡಿಸಿದೆ.
ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ ಅಡಿಯಲ್ಲಿ ಜಿಲ್ಲೆಯಾದ್ಯಂತ ನಿತ್ಯವೂ ಸಂಗ್ರಹವಾಗುತ್ತಿದ್ದ ಹಣ ಅದೇ ದಿನ ಬ್ಯಾಂಕ್‍ಗೆ ಡೆಪಾಸಿಟ್ ಆಗುತ್ತಿತ್ತು. ಆದರೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಅ.24ರ ಮಂಗಳವಾರ ಹಣವನ್ನು ಕಟ್ಟಲಾಗಿರಲಿಲ್ಲ. ಹೀಗಾಗಿ ಕಚೇರಿಯಲ್ಲಿನ ಲಾಕರ್ ನಲ್ಲೇ ಹಣ ಇಟ್ಟು ಹೋಗಿದ್ದರು. ಇದೆಲ್ಲ ತಿಳಿದುಕೊಂಡವರೇ ಕೃತ್ಯ ಎಸಗಿರಬಹುದು ಅಂತ ಶಂಕೆ ವ್ಯಕ್ತವಾಗಿದೆ. ಸದ್ಯ ಕಚೇರಿಯ ಸಿಬ್ಬಂದಿಯನ್ನೂ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಇಷ್ಟೊಂದು ಹಣ ಕಳ್ಳತವಾಗಿರೋದು, ಅದರಲ್ಲೂ ಖದೀಮರು ಯಾವುದೇ ಸುಳಿವು ಬಿಡದೇ ಹೋಗಿರೋದು ತನಿಖೆಗೆ ಸವಾಲಾಗಿದೆ. ಇದೇ ಕಾರಣಕ್ಕೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರೇ ಸ್ಥಳ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.
Theives decamped with Rs 1.24 crore in cash after breaking into four lockers at the Sri Kshetra Dharmasthala Rural Development office at Rayapur Layout in the district. The thieves gained entry by breaking a window of the office toilet while the security guards were out for lunch. There were no CCTV cameras installed, giving rise to many doubts.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm