ಬ್ರೇಕಿಂಗ್ ನ್ಯೂಸ್
01-11-23 12:17 pm Bangalore Correspondent ಕರ್ನಾಟಕ
ಬೆಂಗಳೂರು, ನ.01: ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ನಗರದ ಕಂಠೀರವ ಸ್ಟೇಡಿಯಂನಲ್ಲಿ ಇಂದು ಹಮ್ಮಿಕೊಂಡಿರುವ 68ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.
ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ನಗರ ಸಂಚಾರ ಪೊಲೀಸರು ಕ್ರೀಡಾಂಗಣದ ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಿದ್ದಾರೆ. ಸಮಾರಂಭಕ್ಕೆ ಅನೇಕ ಮಂದಿ ಆಗಮಿಸಿರುವುದರಿಂದ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದು, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ.ಶಿವಕುಮಾರ್, ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಎಂ.ಚಂದ್ರಶೇಖರ್ ಮತ್ತು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.


ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. 1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು" ಎಂದು ಹೇಳಿದ್ದಾರೆ.
Karnataka CM Siddaramaiah hoists Karnataka flag for 68th Karnataka Rajyotsava 2023.Karnataka Chief Minister Siddaramaiah on Wednesday took part in the 68th Karnataka Rajyotsava celebrations and hoisted the national flag at Kanteerava Stadium in Bengaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm