ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm