ಬ್ರೇಕಿಂಗ್ ನ್ಯೂಸ್
03-11-23 05:01 pm HK News Desk ಕರ್ನಾಟಕ
ಹುಬ್ಬಳ್ಳಿ, ನ.04: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ವಿವಾಹಿತ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ. ನಿಖಿಲ್ ಕುಂದಗೋಳ (28) ಮನೆಯಲ್ಲೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿಖಿಲ್ ಪ್ರೀತಿ ಎಂಬ ಯುವತಿಯನ್ನು ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದ.
ಆದರೆ, ಕಳೆದ ಕೆಲ ತಿಂಗಳಿಂದ ಪತಿ ಹಾಗೂ ಪತ್ನಿಯ ನಡುವೆ ವಿರಸ ಮೂಡಿದ್ದು, ನಿತ್ಯ ಇಬ್ಬರ ಮಧ್ಯೆ ಜಗಳವಾಗುತ್ತಿತ್ತು. ಪರಿಣಾಮ ಪತ್ನಿ ಪ್ರೀತಿ ನಿಖಿಲ್ ಕಿರುಕುಳ ನೀಡಿದ್ದಾನೆಂದು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇಲೆ ಕೇಶ್ವಾಪುರ ಪೊಲೀಸರು ನಿಖಿಲ್‌ನನ್ನು ಕರೆಸಿ ವಿಚಾರಣೆ ನಡೆಸಿದ್ದರು. ವಿಚಾರಣೆ ಸಂದರ್ಭದಲ್ಲಿ ಮದುವೆ ವೇಳೆ ಪತ್ನಿ ಮನೆಯವರು ಕೊಟ್ಟಿರುವ ವಸ್ತುಗಳು ಹಾಗೂ ವರದಕ್ಷಿಣೆ ಮರಳಿಸುವಂತೆ ಪೊಲೀಸರು ತಾಕೀತು ಮಾಡಿದ್ದರಂತೆ. ಇದರಿಂದ ಮನನೊಂದು ಪೊಲೀಸ್ ಠಾಣೆಯಿಂದ ಮನೆಗೆ ಬಂದ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಗನ ಸಾವಿನ ಕುರಿತು ಕುಟುಂಬಸ್ಥರು ಪೊಲೀಸರ ಒತ್ತಡದಿಂದ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಕುರಿತಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಠಾಣೆಯ ಇನ್ಸ್ಪೆಕ್ಟರ್, ಎಎಸ್ಐ ಸೇರಿ ಎಂಟು ಜನರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೇಶ್ವಾಪೂರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಯು.ಎಚ್. ಸಾತೇನಹಳ್ಳಿ, ಎಎಸ್ಐ ಜಯಶ್ರೀ ಛಲವಾದಿ, ಮೃತನ ಪತ್ನಿ ಪ್ರೀತಿ ಪೊಗಳಾಪುರ, ಧನರಾಜ್, ಮಂಜುಳಾ, ಆನಂದಪ್ಪ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ನಿಖಿಲ್ ಅವರ ತಾಯಿ ಗೀತಾ ಕುಂದಗೋಳ ದೂರು ನೀಡಿದ್ದಾರೆ.
ನಿಖಿಲ್ ಸಾವಿಗೆ ಅವರ ಪತ್ನಿ ಕುಟುಂಬದವರು ಹಾಗೂ ಕೇಶ್ವಾಪುರ ಠಾಣೆ ಇನ್ಸ್ಪೆಕ್ಟರ್ ಎಎಸ್ಐ ಕಾರಣ, ಗುರುವಾರ ತಡರಾತ್ರಿ ಮಗನಿಗೆ ನೋಟಿಸ್ ನೀಡಿ ದೌರ್ಜನ್ಯ ಎಸಗಿದ್ದರು. ಇದರಿಂದ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.
ನಿಖಿಲ್ ಹಾಗೂ ಪ್ರೀತಿ ಕುಟುಂಬದವರು ಒಪ್ಪಿ 2022 ರ ಡಿಸೆಂಬರ್ನಲ್ಲಿ ಇಬ್ಬರಿಗೆ ಮದುವೆ ಮಾಡಲಾಗಿತ್ತು. ಸ್ವಲ್ಪ ಸಮಯದ ನಂತರ ಯುವತಿಗೆ ಅನೈತಿಕ ಸಂಬಂಧ ಇದೆ ಎಂದು ನಿಖಿಲ್ ಹಾಗೂ ಆತನ ಮನೆಯವರು ಆರೋಪಿಸಿದ್ದರು. ಈ ಹಿನ್ನೆಲೆ ಎರಡು ಕುಟುಂಬಗಳ ನಡುವೆ ಮಾತಿಗೆ ಮಾತು ಕೂಡ ಬೆಳೆದಿತ್ತು. ಈ ಗಲಾಟೆ ನಂತರ ಶುಕ್ರವಾರ ನಿಖಿಲ್‌ನನ್ನು ಪೊಲೀಸ್ ಠಾಣೆಗೆ ಕರೆಸಿ ಮದುವೆ ಸಮಯದಲ್ಲಿ ನೀಡಿದ್ದ 2 ಲಕ್ಷ ನಗದು, ಬಾಂಡೆ ಸಾಮಗ್ರಿ ಹಾಗೂ ಚಿನ್ನಾಭರಣವನ್ನು ನೀಡಬೇಕು. ಇಲ್ಲದಿದ್ದರೆ ವರದಕ್ಷಿಣೆ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
A married man committed suicide in Kotilingeshwara Nagar following a family dispute. Nikhil Kundgol (28) committed suicide at his home. Nikhil had married a girl named Preethi a year ago.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm