ಬ್ರೇಕಿಂಗ್ ನ್ಯೂಸ್
03-11-23 10:31 pm Bangalore Correspondent ಕರ್ನಾಟಕ
ಬೆಂಗಳೂರು, ನ.3: ಬೈಂದೂರು ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮತ್ತು ಇತರ ಆರು ಮಂದಿಯನ್ನು ಬಂಧಿಸಿ 50 ದಿನಗಳ ನಂತರ ಸಿಸಿಬಿ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಯಿದೆ.
ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಟಿಕೆಟ್‌ಗಾಗಿ ನಗದು ಹಗರಣದಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. 68 ಸಾಕ್ಷಿಗಳಿಂದ ಹೇಳಿಕೆ ಪಡೆದು ಆಡಿಯೋ, ವಿಡಿಯೋ ಮುಂತಾದ ಡಿಜಿಟಲ್ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಚೈತ್ರಾ ಸೇರಿ ಆರು ಮಂದಿ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ಪಡೆದು ವಂಚಿಸಿದ್ದರು.
ಮುಂದಿನ ವಾರ ಸಿಸಿಬಿ ಪೊಲೀಸರು ಏಳು ಜನರ ವಿರುದ್ಧದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಚೈತ್ರಾ ಕುಂದಾಪುರ, ಶ್ರೀಕಾಂತ್, ಗಗನ್ ಕಡೂರ್, ವಿಜಯನಗರ ಮಠದ ಹಾಲಶ್ರೀ, ಧನರಾಜ್ ಮತ್ತು ಚನ್ನನಾಯಕ್ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಸಜ್ಜಾಗಿದ್ದಾರೆ. ಆರೋಪಿಗಳಿಂದ 4.11 ಕೋಟಿ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ದೂರುದಾರರಾದ ಉದ್ಯಮಿ ಗೋವಿಂದ ಬಾಬು ಅವರು ಚೈತ್ರಾ ಮತ್ತು ಗ್ಯಾಂಗ್ ಕಂತುಗಳಲ್ಲಿ 5 ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಚೈತ್ರಾ ಮತ್ತು ಅವರ ತಂಡ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ನಂಬಿಸಿ ಬಿಜೆಪಿ ಟಿಕೆಟ್ ಭರವಸೆ ನೀಡಿದ್ದರು. ಹಣ ಪಡೆದ ನಂತರ ತನ್ನಿಂದ ಹಣ ಪಡೆದಿದ್ದ ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ವಿಶ್ವನಾಥ್ ಸಾವನ್ನಪ್ಪಿದ್ದು, ಮರು ಪಾವತಿಸಲು ಸಾಧ್ಯವಿಲ್ಲ ಎಂದು ಆರೋಪಿಗಳು ಕತೆಕಟ್ಟಿದ್ದರು.
CCB police prepare charge sheet against chaithra kundapura over BJP ticket scam.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm