ಬ್ರೇಕಿಂಗ್ ನ್ಯೂಸ್
05-11-23 06:22 pm HK News Desk ಕರ್ನಾಟಕ
ಶಿವಮೊಗ್ಗ, ನ 05 : ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್ ನಲ್ಲಿ ಎರಡು ಅನಾಮಧೇಯ ಬಾಕ್ಸ್ ಗಳು ಪತ್ತೆಯಾಗಿದ್ದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಎರಡು ಬಾಕ್ಸ್ ಗಳು ರೈಲು ನಿಲ್ದಾಣದ
ಪಾರ್ಕಿಂಗ್ ಏರಿಯಾದಲ್ಲಿ ಕಂಡು ಬಂದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಯಾರೂ ಹತ್ತಿರ ಹೋಗದಂತೆ ಪೊಲೀಸರು ಬ್ಯಾರಿಕೇಡ್ ಇಟ್ಟು ನಿಗಾ ವಹಿಸಿದ್ದಾರೆ.


ಎರಡು ಬಾಕ್ಸ್ ಗಳಲ್ಲಿ ಏನಿದೆ ಎಂಬುದು ಇನ್ನು ತಿಳಿದು ಬಂದಿಲ್ಲ ಆದರೆ ಬಾಕ್ಸ್ ಮೇಲೆ ಫುಡ್ ಗ್ರೈನ್ಸ್ ಅಂಡ್ ಶುಗರ್ಸ್ ಎಂದು ಬರೆದಿದ್ದು ಯಾರಿಗೆ ಸೇರಿದ್ದು ಎಂದು ಇನ್ನೂ ತಿಳಿದು ಬಂದಿಲ್ಲವಾಗಿದೆ.

ಅನಾಮಧೇಯ ಬಾಕ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದ್ದು ಅಲ್ಲದೆ ಬಾಕ್ಸ್ ಪರಿಶೀಲನೆಗೆ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳ ಸ್ಥಳಕ್ಕೆ ದೌಡಾಯಿಸಿದೆ.
ಸದ್ಯ ಪೊಲೀಸರು ಬಾಕ್ಸ್ಗಳು ದೊರೆತಿರುವ ಸುಮಾರು 200 ಮೀಟರ್ನಷ್ಟು ದೂರದವರೆಗೆ ಎರಡೂ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಸಂಚಾರ ಬಂದ್ ಮಾಡಿದ್ದಾರೆ. ಸಂಚಾರಿ ಪೊಲೀಸರು ವಾಹನ ಸಂಚಾರಕ್ಕೆ ಬೇರೆ ಮಾರ್ಗದಲ್ಲಿ ಅನುಕೂಲ ಮಾಡಿಕೊಟ್ಟಿದ್ದಾರೆ. ಬಾಕ್ಸ್ ಬಗ್ಗೆ ಅನುಮಾನ ಹೆಚ್ಚಾಗಿರುವ ಕಾರಣ ಅದರಲ್ಲಿರುವ ವಸ್ತು ಏನೆಂಬುದನ್ನು ಪತ್ತೆ ಹಚ್ಚಲು ಬೆಂಗಳೂರಿನಿಂದ ವಿಶೇಷ ತಂಡ ಕರೆಯಿಸಲಾಗುತ್ತಿದೆ.
ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ:
ಬಾಕ್ಸ್ ಪತ್ತೆಯಾದ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಾಕ್ಸ್ ಸುತ್ತಲೂ ಪೊಲೀಸರು ಮರಳಿನ ಚೀಲ ಹಾಕಿದ್ದಾರೆ.
2 suspicious boxes found at parking lot of Shivamogga Railway station, bomb squad arrives at spot. Police have deployed heavy security over the railway station area.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm