ಬ್ರೇಕಿಂಗ್ ನ್ಯೂಸ್
11-11-23 07:35 pm Bangalore Correspondent ಕರ್ನಾಟಕ
ಬೆಂಗಳೂರು, ನ.11: ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕ ಬೆನ್ನಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯಾರಾಗುತ್ತಾರೆ ಎಂಬ ಕುತೂಹಲ ಎದ್ದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೊಸ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ನ.17ರಂದು ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದಿದ್ದಾರೆ.
ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ದೂರವಾಣಿ ಕರೆ ಮಾಡಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಆಶೀರ್ವಾದ ಪಡೆದಿದ್ದೇನೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸಿದ್ದೇನೆ. ನ.17ರಂದು ಶಾಸಕಾಂಗ ಪಕ್ಷದ ಸಭೆ ನಡೆಸುವಂತೆ ಸೂಚಿಸಿದ್ದಾರೆ. ಕೇಂದ್ರದ ವೀಕ್ಷಕರೂ ಸಭೆಗೆ ಆಗಮಿಸಲಿದ್ದು ಎಲ್ಲ ಶಾಸಕರ ಅಭಿಪ್ರಾಯ ಪಡೆದು ನೂತನ ನಾಯಕನ ಆಯ್ಕೆ ಮಾಡಲಾಗುವುದು ಎಂದು ವಿಜಯೇಂದ್ರ ತಿಳಿಸಿದ್ದಾರೆ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಲವರ ಹೆಸರು ಕೇಳಿಬರುತ್ತಿದ್ದರೂ, ಲಿಂಗಾಯತ ಸಮುದಾಯದ ವಿಜಯೇಂದ್ರ ಅಧ್ಯಕ್ಷನಾಗಿ ನೇಮಕ ಆಗಿರುವುದರಿಂದ ಪ್ರತಿಪಕ್ಷ ನಾಯಕನ ಆಯ್ಕೆಗೆ ಲೆಕ್ಕಾಚಾರ ಬದಲಾಗಲಿದೆ. ಹಿಂದಿನ ಸರಕಾರದಲ್ಲಿ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದರೆ, ಈಗ ಅದೇ ಸಮುದಾಯದ ವಿಜಯೇಂದ್ರ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ವಿಧಾನಸಭೆ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಲಿಂಗಾಯತ ಸಮುದಾಯ ಹೊರತುಪಡಿಸಿ ಅನ್ಯ ಸಮುದಾಯದ ಪ್ರಭಾವಿ ನಾಯಕರನ್ನು ಪರಿಗಣಿಸುವ ಸಾಧ್ಯತೆ ಇದೆ.
ಜೆಡಿಎಸ್, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಬೆಂಬಲಿಸಿರುವುದರಿಂದ ಅದರ ಶಾಸಕಾಂಗ ಪಕ್ಷದ ನಾಯಕನಾಗಿ ಎಚ್ ಡಿ ಕುಮಾರಸ್ವಾಮಿ ಒಕ್ಕಲಿಗರೇ ಇದ್ದಾರೆ. ಹಾಗಾಗಿ ಮೈತ್ರಿ ಪಕ್ಷ ಬಿಜೆಪಿಯಲ್ಲಿ ಅದೇ ಸಮುದಾಯದ ಮತ್ತೊಬ್ಬ ವ್ಯಕ್ತಿ ವಿಪಕ್ಷ ನಾಯಕನಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಈ ಸ್ಥಾನಕ್ಕೆ ಹಿಂದುಳಿದ ವರ್ಗ ಅಥವಾ ಪರಿಶಿಷ್ಟ ವರ್ಗದ ಪ್ರಭಾವಿ ನಾಯಕರನ್ನು ಪರಿಗಣಿಸುವ ಸಾಧ್ಯತೆ ಇದೆ. ವಿಧಾನ ಪರಿಷತ್ತಿನಲ್ಲಿ ಕಳೆದ ಬಾರಿ ಹಿರಿಯ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಇದ್ದರು. ವಿಧಾನಸಭೆಗೆ ಯಾರನ್ನು ನೇಮಕ ಮಾಡುತ್ತಾರೆ ಅದನ್ನು ಆಧರಿಸಿ ಕೋಟ ಸ್ಥಾನ ನಿರ್ಧಾರವಾಗಲಿದೆ. ವಿಧಾನಸಭೆ ನಾಯಕನಾಗಿ ಹಿಂದುಳಿದ ವರ್ಗದಲ್ಲಿ ಸುನಿಲ್ ಕುಮಾರ್ ಗೆ ಸ್ಥಾನ ಲಭಿಸುವ ಸಾಧ್ಯತೆಯೂ ಇದೆ.
With the appointment of a new president of the state BJP, there is a lot of curiosity as to who will be the leader of the BJP legislature party. The new state president B Y Vijayendra said that the new leader will be elected at the legislature party meeting to be held on November 17.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm