ಬ್ರೇಕಿಂಗ್ ನ್ಯೂಸ್
13-11-23 08:12 pm Bangalore Correspondent ಕರ್ನಾಟಕ
ಬೆಂಗಳೂರು, ನ.13: ಐದು ರಾಜ್ಯಗಳ ಚುನಾವಣೆ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದ ಕಾರ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳನ್ನು ಬದಲಿಸಲು ಪಕ್ಷ ಚಿಂತನೆ ನಡೆಸಿದೆ ಎಂದವರು ಹೇಳಿದ್ದಾರೆ.
ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಯುವ ನಾಯಕ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ, ಕಾಂಗ್ರೆಸ್ ಕೂಡ ಪಕ್ಷದ ರಾಜ್ಯ ಘಟಕದ ಪುನಶ್ಚೇತನಕ್ಕೆ ಮುಂದಾಗಿದೆ. ಲೋಕಸಭೆ ಚುನಾವಣೆ ವರೆಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿತ್ತು. ಆದರೆ, ಸಿದ್ದರಾಮಯ್ಯ ಸಂಪುಟದಲ್ಲಿ ಮೂವರು ಸಚಿವರಾಗಿರುವ ಕಾರಣ ಪಕ್ಷದ ಹುದ್ದೆಯ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದು ಸತೀಶ್ ಜಾರಕಿಹೊಳಿ ಒತ್ತಾಯಿಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ, ಐದು ರಾಜ್ಯಗಳ ಚುನಾವಣೆ ನಂತರ ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ. ನಾವು ಈಗ ಸಚಿವರಾಗಿರುವ ಕಾರಣ ನಮ್ಮನ್ನು ಬಿಡುಗಡೆ ಮಾಡುವಂತೆ ಹೈಕಮಾಂಡ್‌ಗೆ ಕೇಳಿದ್ದೇವೆ. ನಾವು ಈಗಾಗಲೇ ಶಿಫಾರಸುಗಳನ್ನು ಕಳುಹಿಸಿದ್ದೇವೆ. ಐದು ರಾಜ್ಯಗಳ ಚುನಾವಣೆ ನಂತರ ಪಕ್ಷವು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಚಿವರಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಎಂಎಲ್‌ಸಿ ಸಲೀಂ ಅಹಮದ್ ಹಾಗೂ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಲ್ಲದೆ, 20 ಜಿಲ್ಲಾಧ್ಯಕ್ಷರ ಸ್ಥಾನವನ್ನು ಲೋಕಸಭೆ ಚುನಾವಣೆಗೂ ಮುನ್ನ ಬದಲಾಯಿಸಲು ಪಕ್ಷ ಮುಂದಾಗಿದೆ.
“We are planning to field one Lingayat and one Kuruba community candidate in the coming Lok Sabha polls in Belagavi district,” Public Works Minister Satish Jarkiholi said in Belagavi on Monday.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm