ಬ್ರೇಕಿಂಗ್ ನ್ಯೂಸ್
14-11-23 02:57 pm Bangalore Correspondent ಕರ್ನಾಟಕ
ಬೆಂಗಳೂರು, ನ 14: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹುಸಿ ಬಾಂಬ್ ಕರೆ ಬಂದಿದ್ದು, ಆತಂಕದಲ್ಲಿ ಖಾಸಗಿ ಕಂಪನಿ ಉದ್ಯೋಗಿಗಳು ಹೊರಬಂದಿರುವ ಘಟನೆ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ಟಿಸಿಎಸ್ ಕಂಪನಿಗೆ ಅನಾಮಧೇಯ ವ್ಯಕ್ತಿಯೋರ್ವ ಬಾಂಬ್ ಇದೆ ಎಂದು ಕರೆ ಮಾಡಿ ಹೇಳಿದ್ದಾನೆ. ಇದರಿಂದ ಕೆಲ ಹೊತ್ತು ಕಂಪನಿಯಲ್ಲಿ ಆತಂಕ ಸೃಷ್ಟಿಯಾಗಿತ್ತು.
ಟಿಸಿಎಸ್ ಕಂಪನಿಯ ಬಿ.ಬ್ಲಾಕ್ ನಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬರುತ್ತಿದ್ದಂತೆ ವಿಷಯ ತಿಳಿದ ಉದ್ಯೋಗಿಗಳು ಆತಂಕದಿಂದ ಹೊರ ಬಂದಿದ್ದಾರೆ. ಕೂಡಲೇ ಪರಪ್ಪನ ಅಗ್ರಹಾರ ಪೊಲೀಸರಿಗೆ ಕಂಪನಿಯವರು ಮಾಹಿತಿ ನೀಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರ ತನಿಖೆ ವೇಳೆ ಈ ಹಿಂದೆ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಮಹಿಳಾ ಮಾಜಿ ಉದ್ಯೋಗಿ ಹೆಚ್ಚಿನ ವಿಧ್ಯಾಭ್ಯಾಸಕ್ಕಾಗಿ ಕೆಲಸ ಬಿಟ್ಟು ಹೋಗಿದ್ದರು. ವಿದ್ಯಾಭ್ಯಾಸ ಬಳಿಕ ರೀ ಜಾಯಿನ್ ಮಾಡಿಕೊಳ್ಳುವಂತೆ ಕಂಪನಿಗೆ ಮಹಿಳೆ ಮನವಿ ಮಾಡಿದ್ದಾರೆ, ಆದರೆ, ಇದಕ್ಕೆ ಕಂಪನಿ ಹಿಂದೇಟು ಹಾಕಿದೆ.
ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ ಮಹಿಳೆ ಕಂಪನಿ ಮೇಲಿನ ದ್ವೇಷಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದಾರೆ. ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ನಿಂದ ತಪಾಸಣೆ ಬಳಿಕ ಹುಸಿ ಕರೆ ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಇನ್ನು ಮಹಿಳೆಯನ್ನು ವಶಕ್ಕೆ ಪಡೆಯಲು ಬೆಂಗಳೂರಿನಿಂದ ಬೆಳಗಾವಿಗೆ ಪೊಲೀಸರ ತಂಡ ಆಗಮಿಸುತ್ತಿದೆ
In yet another shocking incident, employees of a private company in Bengaluru have come out in panic after receiving a hoax bomb call. An unidentified person called electronic city TCS and told them that there was a bomb. This created panic in the company for some time.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm