ಬ್ರೇಕಿಂಗ್ ನ್ಯೂಸ್
20-11-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ನಗರದ ವೈಟ್ ಫೀಲ್ಡ್ ಬಳಿಯ ಕಾಡುಗೋಡಿ ಎಂಬಲ್ಲಿ ನಡೆದಿದೆ. 23 ವರ್ಷದ ಸೌಂದರ್ಯ ಮತ್ತು 9 ತಿಂಗಳ ಮಗು ಲಿಯಾ ಮೃತ ದುರ್ದೈವಿಗಳು.
ಭಾನುವಾರ ಬೆಳಗ್ಗೆ ಸುಮಾರು 5 ಗಂಟೆಗೆ ವೇಳೆಗೆ ಪತಿ ಸಂತೋಷ್, ಮಗು ಮತ್ತು ಪತ್ನಿ ಸೌಂದರ್ಯಾ ತಮಿಳುನಾಡಿನಿಂದ ಬೆಂಗಳೂರಿಗೆ ಬಸ್ಸಿನಲ್ಲಿ ಬಂದಿದ್ದರು. ಬಸ್ಸಿನಿಂದಿಳಿದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಮೇಲೆ ಮಗುವನ್ನು ಎತ್ತಿಕೊಂಡಿದ್ದ ಪತ್ನಿ ಸೌಂದರ್ಯ ಕಾಲಿರಿಸಿದ್ದು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ದಹನವಾಗಿದ್ದಾರೆ. ಪತಿ ಸಂತೋಷ್ ಏನಾಗುತ್ತಿದೆ ಎಂದು ತಿಳಿಯದೆ ಇಬ್ಬರ ರಕ್ಷಣೆಗೆ ಮುಂದಾಗಿದ್ದು ಕೈಗೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮಗುವನ್ನು ಸೆಳೆಯುವ ಪ್ರಯತ್ನ ಮಾಡಿದರೂ ಸಾಧದಯವಾ. ಪತಿಯ ಕಣ್ಮುಂದೆಯೇ ಪತ್ನಿ ಹಾಗೂ ಮಗು ಜೀವಂತ ಸುಟ್ಟು ಹೋಗಿದ್ದಾರೆ.
ಕಾಡುಗೋಡಿಯ ಎಕೆ ಗೋಪಾಲ್ ಕಾಲೋನಿ ನಿವಾಸಿಯಾಗಿರುವ ಸಂತೋಷ್ ಕುಟುಂಬ ಸಮೇತರಾಗಿ ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳಿದ್ದರು. ಬೆಂಗಳೂರಿನಲ್ಲಿ ಪತ್ನಿಗೆ ಐಟಿಐ ಪರೀಕ್ಷೆ ಇದ್ದುದರಿಂದ ತುರ್ತಾಗಿ ವಾಪಸ್ ಆಗಿದ್ದರು. ಆದರೆ ಮನೆ ತಲುಪುವ ಮೊದಲೇ ಪತ್ನಿ ಮಗು ವಿದ್ಯುತ್ ತಂತಿಗೆ ಬಲಿಯಾಗಿದ್ದಾರೆ. ತಾಯಿ, ಮಗು ಸಾವಿಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣ ಸಂಬಂಧ ಬೆಸ್ಕಾಂ ಇಲಾಖೆಯ ಐವರು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The Bangalore Electricity Supply Company Limited (Bescom) has suspended five of its officials for negligence and issued show-cause notices to two senior officers after a mother and daughter died due to electrocution in Bengaluru.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm