ಬ್ರೇಕಿಂಗ್ ನ್ಯೂಸ್
20-11-23 04:36 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಮೊನ್ನೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಮತ್ತೆ ಅರೆಸ್ಟ್ ಆಗಿದ್ದಾರೆ. ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸ್ವಾಮೀಜಿ ವಿರುದ್ಧ 2ನೇ ಪ್ರಕರಣ ದಾಖಲಾಗಿದೆ.
ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯ ಹೊರಡಿಸಿದ ಅರೆಸ್ಟ್ ವಾರೆಂಟ್ ಆಧರಿಸಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಮುರುಘಾ ಶ್ರೀಗಳನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.
ಮಧ್ಯಾಹ್ನ ವೇಳೆಗೆ ಕೋರ್ಟ್ ವಾರೆಂಟ್ ಹೊರಬಿದ್ದ ಕೂಡಲೇ ಚಿತ್ರದುರ್ಗ ಪೊಲೀಸರು ದಾವಣಗೆರೆಗೆ ಆಗಮಿಸಿ ಶರಣರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಚಿತ್ರದುರ್ಗ ತಲುಪುತ್ತಿದ್ದಂತೆ ಶರಣರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಈ ನಡುವೆ ಎರಡನೇ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಹೇಳಿರುವ ಶರಣರ ಪರ ವಕೀಲರು ಈ ಅಂಶವನ್ನು ಮುಂದಿಟ್ಟುಕೊಂಡು ಬಂಧನದ ಆದೇಶ ರದ್ದುಪಡಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ರಹಿತ ಅರೆಸ್ಟ್ ವಾರಂಟ್ ಹೊರಡಿಸಿತ್ತು. 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಜೈಲಿನಲ್ಲಿದ್ದು, ಆಚೆ ಬಂದಿದ್ದ ಮುರುಘಾ ಶ್ರೀಗಳನ್ನು ಮತ್ತೆ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದ ವಸತಿ ಶಾಲೆಯ ಬಾಲಕಿಯರಿಬ್ಬರು 2022ರ ಆಗಸ್ಟ್ 26ರಂದು ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಗೆ ತೆರಳಿ ಶರಣರ ವಿರುದ್ಧ ದೂರು ನೀಡಿದ್ದರು. ಸಂತ್ರಸ್ತ ಬಾಲಕಿಯರ ಹೇಳಿಕೆ ಪಡೆದ ಬಳಿಕ ಶರಣರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣ ಮೈಸೂರಿನಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿತ್ತು. ಪ್ರಕರಣದಲ್ಲಿ ಸ್ವಾಮೀಜಿ, ವಾರ್ಡನ್, ಕಾರ್ಯದರ್ಶಿ, ವಕೀಲ, ಮಠದ ಉತ್ತರಾಧಿಕಾರಿ ಸೇರಿ ಐವರ ವಿರುದ್ಧ ಆರೋಪ ಮಾಡಲಾಗಿತ್ತು. ಮುರುಘಾ ಶರಣರನ್ನು 2022ರ ಸೆಪ್ಟೆಂಬರ್ 1ರಂದು ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು.
Shivamurthy Sharana of Muruga Mutt, who was released from jail recently, has been arrested again. The second case has been registered against swamiji for sexually assaulting minor children.
29-08-25 05:59 pm
HK News Desk
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 09:08 pm
Mangalore Correspondent
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
Mangalore Rain, School College Holiday: ಭಾರೀ...
28-08-25 10:07 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm