ಬ್ರೇಕಿಂಗ್ ನ್ಯೂಸ್
21-11-23 09:34 pm Bangalore Correspondent ಕರ್ನಾಟಕ
ಬೆಂಗಳೂರು, ನ.21: ಬೆಂಗಳೂರು ಕಂಬಳಕ್ಕೆ ದೆಹಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಆಹ್ವಾನಿಸಿದ್ದು ವಿವಾದಕ್ಕೀಡಾಗುತ್ತಲೇ ಅವರನ್ನು ಆಹ್ವಾನಿತರ ಪಟ್ಟಿಯಿಂದ ಕೈಬಿಡಲಾಗುವುದು ಎಂದು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ನ.25 ಮತ್ತು 26ರಂದು ನಡೆಯುವ ಕಂಬಳಕ್ಕೆ ಭರದ ಸಿದ್ಧತೆ ನಡೆಯುತ್ತಿರುವಾಗಲೇ ಕಂಬಳ ಕೂಟಕ್ಕೆ ಹೆಣ್ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಸಿಂಗ್ ಕರೆಸಲಾಗಿದೆ ಎನ್ನುವ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಸರಕಾರವೇ ಮುಂದೆ ನಿಂತು ಆಯೋಜಿಸುತ್ತಿರುವ ಕಂಬಳಕ್ಕೆ ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದನನ್ನು ಕರೆಸಿರುವುದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಕಾಂಗ್ರೆಸ್ ನಾಯಕರೇ ಕಟು ಟೀಕೆಯನ್ನು ಮಾಡಿದ್ದರು.

ಇದರ ಬೆನ್ನಲ್ಲೇ ಆಶೋಕ್ ರೈ ಹೇಳಿಕೆ ನೀಡಿದ್ದು, ಕಂಬಳ ಜನಪದ ಕ್ರೀಡೆಯಾಗಿದ್ದು ಇದೊಂದು ಮಹತ್ವದ ಕಾರ್ಯಕ್ರಮವೂ ಹೌದು. ಕಾರ್ಯಕ್ರಮಕ್ಕೆ ಬೇರೆ ಬೇರೆ ಸಂಘಟನೆಗಳು ತಮ್ಮ ನಾಯಕರನ್ನು ಕರೆಸಲು ಆಹ್ವಾನ ನೀಡಿವೆ. ಪುನೀತ್ ರಾಜಕುಮಾರ್ ಅಭಿಮಾನಿಗಳ ಬೇಡಿಕೆಯಂತೆ ವೇದಿಕೆಗೆ ನಟ ಪುನೀತ್ ಹೆಸರಿನ್ನಿಡಲಾಗಿದೆ. ಸಿದ್ಧಿ ಜನಾಂಗದವರು ಬ್ರಿಜ್ ಭೂಷಣ್ ಸಿಂಗ್ ಅವರನ್ನು ಕರೆಸಲು ಹೇಳಿದ್ದು ಅದರಂತೆ ಆಮಂತ್ರಣ ಪತ್ರ ರೆಡಿಯಾಗಿತ್ತು. ಸಂಸದ ಬ್ರಿಜ್ ಭೂಷಣ್ ಸಿಂಗ್ ತಾನು ಬರೋದಿಲ್ಲ ಎಂದೂ ಆರಂಭದಲ್ಲಿ ಹೇಳಿದ್ದರು. ಈಗ ಆಮಂತ್ರಣ ಪತ್ರವನ್ನು ಮರು ಮುದ್ರಣ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕಂಬಳ ಎನ್ನುವುದು ಎಲ್ಲರ ಕಾರ್ಯಕ್ರಮ, ಎಲ್ಲರಿಗೆ ಸೇರಿದ್ದು. ಇದಕ್ಕೆ ಬಿಜೆಪಿ, ಕಾಂಗ್ರೆಸ್ ಅನ್ನುವ ರಾಜಕೀಯ, ಮತ ಭೇದ ಇಲ್ಲದೆ ಎಲ್ಲರೂ ಆಗಮಿಸುತ್ತಾರೆ. ದೊಡ್ಡ ಕಾರ್ಯಕ್ರಮ ಸಂಘಟಿಸುವಾಗ ಸಣ್ಣ ಪುಟ್ಟ ತಪ್ಪುಗಳು ಆಗುತ್ತವೆ. ಅದನ್ನು ಸರಿ ಪಡಿಸಲಾಗುವುದು ಎಂದು ಅಶೋಕ್ ರೈ ಹೇಳಿದ್ದಾರೆ. ದೆಹಲಿಯ ಕೈಸರ್ಗಂಜ್ ಲೋಕಸಭಾ ಕ್ಷೇತ್ರದ ಸಂಸದನಾಗಿರುವ ಬ್ರಿಜ್ ಭೂಷಣ್ ಸಿಂಗ್ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿದ್ದಾಗ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೀಡಾಗಿದ್ದರು. ಖ್ಯಾತ ನಾಮ ಕುಸ್ತಿ ಪಟುಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
The Bengalore Kambala Committee president and Congress MLA Ashok Rai Kodimbadi has opted not to extend an invitation to BJP MP Brij Bhushan Sharan Singh for the upcoming Kambala event in coastal Karnataka, following widespread criticism on social media regarding the initial decision to invite him.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm