ಬ್ರೇಕಿಂಗ್ ನ್ಯೂಸ್
29-11-23 08:11 pm Bangalore Correspondent ಕರ್ನಾಟಕ
Photo credits : ANI news
ಬೆಂಗಳೂರು, ನ.29: ಚೈನಾ ನ್ಯುಮೋನಿಯಾ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೈನಾ ನ್ಯುಮೋನಿಯಾ ಹರಡುತ್ತಿದೆ ಎಂಬ ವರದಿಗಳ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಪ್ರಕಟಿಸಿದೆ. ಇದೇ ರೀತಿ ಕೇಂದ್ರ ಸರ್ಕಾರವೂ ಈ ಸಂಬಂಧ ಮಾರ್ಗಸೂಚಿ ಪ್ರಕಟಿಸಿದೆ ಎಂದು ಹೇಳಿದರು.
ರಾಜ್ಯದಲ್ಲಿ ಇದುವರೆಗೆ ಚೈನಾ ನ್ಯುಮೋನಿಯಾಗೆ ಸಂಬಂಧಿಸಿದ ವೈರಸ್ ಪತ್ತೆಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಆಸ್ಪತ್ರೆಗಳಲ್ಲೂ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಈ ಸಂಬಂಧ ಅಣಕು ಪ್ರದರ್ಶನ ನಡೆಸಿ ಎಚ್ಚರಿಕೆ ಮೂಡಿಸಬೇಕು ಎಂಬುದೂ ಸೇರಿದಂತೆ ಹಲವು ಬಗೆಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಕೆ ಮಾಡಲು ಆದ್ಯತೆ ನೀಡುವಂತೆ ಹೇಳಲಾಗಿದೆ ಎಂದರು.

ಜ್ವರ ಬಂದ ತಕ್ಷಣ ಜನ ಆಸ್ಪತ್ರೆಗಳಿಗೆ ತೆರಳಿ ವಿವಿಧ ಪರೀಕ್ಷೆಗಳಿಗೆ ಒಳಪಡಬೇಕು ಎಂದ ಅವರು, ಈ ಶೀತಜ್ವರ ಸಾಮಾನ್ಯವಾಗಿ ಐದು ದಿನಗಳವರೆಗೆ ಇರುತ್ತದೆ. ಹೀಗಾಗಿ ಯಾವ ಕಾರಣಕ್ಕೂ ಇದನ್ನು ನಿರ್ಲಕ್ಷಿಸಬಾರದು ಎಂದು ಹೇಳಿದರು. ವಯೋವೃದ್ಧರು ಮತ್ತು ಮಕ್ಕಳು ಎಚ್ಚರಿಕೆಯಿಂದ ಇರಬೇಕು. ಅದೇ ರೀತಿ ವಿವಿಧ ರೋಗಗಳಿಂದ ಬಳಲುತ್ತಿರುವವರು ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.
ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರಗಳನ್ನು ಬಳಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಆಗಾಗ ಕೈ ತೊಳೆಯುತ್ತಿರಬೇಕು ಎಂದು ಇದೇ ಸಂದರ್ಭದಲ್ಲಿ ಅವರು ಜನರಿಗೆ ಮನವಿ ಮಾಡಿಕೊಂಡರು. ಸೋಂಕಿಗೆ ಸಂಬಂಧಿಸಿದಂತೆ ನಿತ್ಯ ಅಧಿಕಾರಿಗಳು ನಿಗಾ ವಹಿಸುತ್ತಾರೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದ ಸಚಿವರು, ಇಷ್ಟೆಲ್ಲದರ ನಡುವೆಯೂ ಜನ ಆತಂಕಪಡುವ ಅಗತ್ಯವೇನಿಲ್ಲ. ಆದರೆ, ಸೋಂಕಿನ ಕುರಿತು ಎಚ್ಚರಿಕೆಯಿರಲಿ ಎಂದು ಸಲಹೆ ನೀಡಿದರು.
The advisory by the Karnataka government mentions the do's and don'ts to avoid any kind of infection. These include covering the mouth and nose while coughing or sneezing, frequent hand washing, avoiding unnecessary touching of the face, and using face masks in crowded places.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am