ಬ್ರೇಕಿಂಗ್ ನ್ಯೂಸ್
01-12-23 05:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ರಾಜಧಾನಿಯ ವಿವಿಧ ಶಾಲೆಗಳಿಗೆ ಇಂದು ಬಾಂಬ್ ಇಟ್ಟಿರುವುದಾಗಿ ಆಗಂತುಕರು ಬೆದರಿಕೆ ಹಾಕಿದ್ದಾರೆ. 15ಕ್ಕೂ ಹೆಚ್ಚು ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್ಗೆ ಬೆದರಿಕೆ ಸಂದೇಶ ರವಾನಿಸಲಾಗಿದೆ.
ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಪ್ರತಿಕ್ರಿಯಿಸಿ, ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಹಾಗೂ ಸ್ಕ್ವೈಡ್‌ಗಳನ್ನು ಕಳುಹಿಸಿ ತಪಾಸಣೆ ನಡೆಸಲಾಗುತ್ತದೆ. ಕಟ್ಟೆಚ್ಚರ ವಹಿಸುವಂತೆ ಸಚಿವರು ನಿರ್ದೇಶಿಸಿದ್ದಾರೆ. ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಕಳೆದ ವರ್ಷ ಕೂಡಾ ಬೆದರಿಕೆ ಬಂದಿತ್ತು. ಆಗ ನಮ್ಮ ಸಿಬ್ಬಂದಿ ಎಚ್ಚೆತ್ತುಕೊಂಡು ಆರೋಪಿಗಳನ್ನು ಪತ್ತೆ ಮಾಡಿದ್ದರು. ಅವುಗಳೆಲ್ಲವೂ ಹುಸಿ ಬೆದರಿಕೆ ಕರೆಗಳಾಗಿದ್ದವು. ಈ ಪ್ರಕರಣವನ್ನೂ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
![]()
ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ:
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ನಗರ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶಿಲೀಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಸ್ ಆದ ನಂತರ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮತ್ತು ಮಕ್ಕಳು ಆತಂಕಪಡುವುದು ಬೇಡ ಎಂದು ತಿಳಿಸಿದ್ದಾರೆ.

ಡಿಸಿಎಂ ಶಿವಕುಮಾರ್ಪ್ರತಿಕ್ರಿಯಿಸಿ, ಹಿರಿಯ ಪೊಲೀಸ್ ಅಧಿಕಾರಿಗಳು ಸದಾಶಿವ ನಗರದ ನೀವ್ ಸ್ಕೂಲ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ತನಿಖೆ ನಡೆಸಲು ಸೂಚಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ:
ಬಸವೇಶ್ವರನಗರದ ಎನ್ಎಎಫ್ಎಲ್ ಶಾಲೆಗೆ ಭೇಟಿ ನೀಡಿದ ಬಳಿಕ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಪೊಲೀಸ್ ಕಮೀಷನರ್ ಜೊತೆ ಮಾತನಾಡಿದ್ದೇನೆ. ಟೈಪ್ ಮಾಡಿದ್ದನ್ನು ನೋಡಿದರೆ ಹೈ ಲೆವೆಲ್ ಟೆರರಿಸ್ಟ್ ರೀತಿ ಕಾಣುತ್ತಿದೆ. ಇವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಇಲ್ಲಿ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಬಂದಿದ್ದು, ಏನೂ ಸಿಕ್ಕಿಲ್ಲ. ಸದ್ಯ 15 ಶಾಲೆಗೆ ಬಾಂಬ್ ಮೇಲ್ ಬಂದಿದೆ. ಜನರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ನಾನು ಕೂಡ ಭೇಟಿ ಮಾಡಿದ್ದೇನೆ ಎಂದರು.
BJP R Ashok says mail shows high level terrorist suspected on bomb mail to schools in Bangalore. Home Minister has ordered for high level probe in this case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am