ಬ್ರೇಕಿಂಗ್ ನ್ಯೂಸ್
04-12-23 04:41 pm HK News Desk ಕರ್ನಾಟಕ
ಮೈಸೂರು, ಡಿ 04: ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್ ನಾಯಕ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ ತಪ್ಪಾದ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗಕ್ಕೆ ತುಸು ಹಾನಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಕಾರಿನಿಂದ ಇಳಿದ ಭವಾನಿ ರೇವಣ್ಣ ಅವರು ಬೈಕ್ ಸವಾರನನ್ನು ಬಾಯಿಗೆ ಬಂದಂತೆ ಬೈದಿದ್ದಾರೆ

ಭವಾನಿ ಅವರು ಕಾರಿನಿಂದ ಕೆಳಗಿಳಿದು ಬಂದು ಬೈಕ್ ಸವಾರ ಆರೋಗ್ಯ ವಿಚಾರಿಸಲಿಲ್ಲ. ಹಿಗ್ಗಾಮುಗ್ಗಾ ಬೈದದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ, ಸುಟ್ರು ಹಾಕ್ರೋ ಈ ಗಾಡಿನ ಎಂದು ಬೈಕ್ ಸವಾರನಿಗೆ ತರಾಟೆಗೆ ತೆಗೆದುಕೊಂಡರು.
ಕೊಡ್ತೀಯಾ 50 ಲಕ್ಷ ರಿಪೇರಿಗೆ ? ;
ವಾಹನದ ಮುಂಭಾಗ ಡ್ಯಾಮೇಜ್ ಆಗಿರುವುದು ನೋಡಿದ ಭವಾನಿ ರೇವಣ್ಣ ಅವರು ಬೈಕ್ ಸವಾರನ ಮೊಬೈಲ್ ಕಸಿದುಕೊಂಡು ಬೈಕ್ ಕೀ ಕಿತ್ತುಕೊಂಡರು. " ನಿನಗೆ ಅಂತಹ ಅರ್ಜೆಂಟ್ ಏನಿತ್ತು? ಗಾಡಿಗೆ ಎಷ್ಟು ಡ್ಯಾಮೇಜ್ ಆಗಿದೆ. ರೆಡಿ ಮಾಡಿಸುವುದು ಹೇಗೆ?’ ಎಂದು ಕೇಳಿದರು. ಅಲ್ಲದೇ, ‘ಬಿಟ್‌ಬಿಡಿ ಅಕ್ಕ’ ಎಂದು ಮಧ್ಯಪ್ರವೇಶಿಸಿದ ಸ್ಥಳೀಯರನ್ನು, ‘ಕೊಡ್ತಿಯಾ ₹ 50 ಲಕ್ಷ ರಿಪೇರಿ ಮಾಡಿಸೋಕೆ? ಸ್ಥಳದಲ್ಲಿರುವವರು ಹಣ ಕೊಡಂಗಿದ್ರೆ ನ್ಯಾಯ ಮಾತಾಡಕ್ಕೆ ಬನ್ನಿ’ ಎಂದು ಸೇರಿದ್ದವರನ್ನು ಕೂಡ ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೈಕ್ ಸವಾರ ಸತ್ತೋಯ್ತಾನೆ ಅಂತ ಅವನ ಬಗ್ಗೆ ಯೋಚೆ ಮಾಡ್ತಾ ಇದ್ದೀಯಲ್ಲಾ, ಒಂದೂವರೆ ಕೋಟಿ ರೂ. ಗಾಡಿ ಡ್ಯಾಮೇಜ್ ಯಾರ್ ಕಟ್ಟಿಕೊಡ್ತಾರೆ ?’ ಎಂದೂ ಸ್ಥಳೀಯರ ವಿರುದ್ಧ ಭವಾನಿ ರೇವಣ್ಣ ಕೆಂಡಾಮಂಡಲವಾದರು.
ದೇಶ ಮುಳುಗಿ ಹೋಗಿತ್ತಾ, ರೈಟಲ್ಲಿ ಬಂದು ಗುದ್ದಿದ್ದೀಯಲ್ಲಾ, ಒಂದೂವರೆ ಕೋಟಿ ಗಾಡಿ ಇದು. ಡ್ಯಾಮೇಜ್ ಮಾಡಿದ್ದೀಯಲ್ಲ, ಸಾಯಂಗಿದ್ರೆ ಬಸ್‌ಗೆ ಸಿಕ್ಕಾಕೊಂಡು ಸಾಯಬೇಕಿತ್ತು. ನನ್ನ ಕಾರ್ ಡ್ಯಾಮೇಜ್ ಮಾಡೋಕೆ ನೀನ್ಯಾವನು?’ ಎಂದು ವಾಹನ ಸವಾರರ ವಿರುದ್ಧ ಹರಿಹಾಯ್ದರು.
ಸಾಲಿಗ್ರಾಮ ಪೊಲೀಸ್ ಠಾಣೆಯ ಸಿಪಿಐ ಜಿ.ಕೃಷ್ಣರಾಜು ಸ್ಥಳಕ್ಕೆ ಭೇಟಿ ನೀಡಿದ್ದರು. ಬೈಕ್ ಸವಾರ ಶಿವಣ್ಣ ಅವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ
ಭವಾನಿ ರೇವಣ್ಣ ಕಾರು ಅಪಘಾತ - ರಿಯಾಕ್ಷನ್ ಹೀಗಿತ್ತು ನೋಡಿ... #Bhavanirevanna #hdrevanna #mysore #toyotafortuner #caraccident #hassan #Toyota #AccidenteVial #Karnataka #Yash19 #jds #jdskarnataka #hdkumaraswamy pic.twitter.com/fSiClX0cG5
— Newspostmortem (@NPnewskannada) December 3, 2023
Bhavani Revanna car accident, video of abusing bike rider goes viral. An undated, purported video of Bhavani Revanna, the daughter-in-law of former Prime Minister HD Deve Gowda, which showed her yelling at villagers after a biker rammed his vehicle into her car has gone viral on social media.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
18-04-26 11:09 pm
Mangalore Correspondent
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm