ಬ್ರೇಕಿಂಗ್ ನ್ಯೂಸ್
04-12-23 06:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 04: ಚುನಾವಣಾ ಅಫಿಡೇವಿಟ್ನಲ್ಲಿ ತಪ್ಪು ಮಾಹಿತಿ ನೀಡಿ ವಂಚಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸಿ.ಎಸ್ಸಿದ್ದರಾಜು ಎನ್ನುವರು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು 2004ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಕೇತಗಾನಹಳ್ಳಿ ಗ್ರಾಮದಲ್ಲಿ 24 ಎಕರೆ ಜಮೀನು ಇದೆ ಎಂದು ಹೇಳಿಕೊಂಡಿದ್ದಾರೆ. ಅವರು ಈಗ್ಗೆ ಕೆಲವು ದಿನಗಳ ಹಿಂದೆ ಮಾಧ್ಯಮದಲ್ಲಿ ಮಾತನಾಡುತ್ತಾ, ವಿವಿಧ ಸರ್ವೆ ನಂ.ಗಳಲ್ಲಿ 1,2,3,4 ಎಕರೆ ಯಂತೆ ವಿವಿಧ ಮೊತ್ತಕ್ಕೆ ಜಮೀನು ಖರೀದಿ ಮಾಡಿದ್ದೇವೆ. ತನ್ನ ತಾಯಿಯ ಸಹೋದರಿ ಶ್ರೀಮತಿ ಸಾವಿತ್ರಮ್ಮರವರಿಂದ ಪಡೆದಿರುವುದಾಗಿಯೂ ಹೇಳಿಕೊಂಡಿದ್ದಾರೆ.
2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆರುವುದಾಗಿ ಹೇಳಿದ್ದಾರೆ. ಆದ್ರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.
ಪೂರ್ಣ ಪ್ರಮಾಣದ ಮಾಹಿತಿಯನ್ನು ನೀಡದೇ ವಂಚಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ದಯಾಪರರಾದ ತಾವುಗಳು ಸೂಕ್ತ ತನಿಖೆಯನ್ನು ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸುತ್ತೇನೆ ಎಂದು ಸಿದ್ದರಾಜು ಅವರು ದೂರು ಸಲ್ಲಿಕೆ ಮಾಡಿದ್ದಾರೆ.
Lokayukta case filed by social activist against H D Kumaraswamy for giving wrong information on his affidavit.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
29-08-25 12:50 pm
HK News Desk
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm