ಬ್ರೇಕಿಂಗ್ ನ್ಯೂಸ್
04-12-23 08:56 pm HK News Desk ಕರ್ನಾಟಕ
ಬೆಳಗಾವಿ, ಡಿ.4: ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು ಜನವರಿಯಿಂದ ಶಾಲೆ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ಗಳನ್ನ ವಿತರಿಸಲು ನಿರ್ಧರಿಸಲಾಗಿದೆ ಎಂದರು.
ಶುಚಿ ಒಂದು ಮಹತ್ವವಾದ ಯೋಜನೆ. ಹೆಣ್ಣುಮಕ್ಕಳಿಗೆ ಇದು ಅತ್ಯಗತ್ಯವಾಗಿದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಬೇರೆ ಬೇರೆ ಕಾರಣಗಳಿಗೆ ಯೋಜನೆ ಸ್ಥಗಿತವಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ ಶುಚಿ ಯೋಜನೆಗೆ ಮರುಚಾಲನೆ ನೀಡುತ್ತಿದ್ದೇವೆ. ಈಗಾಗಲೇ ನಾಲ್ಕು ವಿಭಾಗವಾರು ಟೆಂಡರ್ ಆಹ್ವಾನಿಸಿ ಬಹುತೇಕ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.
10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಯೋಜಿಸಲಾಗಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗು ನ್ಯಾಪ್ಕಿನ್ ಗಳನ್ನ ವಿತರಿಸಲಾಗುವುದು. ಈ ಮೊದಲು ಸರ್ಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಕಿನ್ ಗಳನ್ನ ವಿತರಿಸಲಾಗುತ್ತಿತ್ತು. ಈ ಬಾರಿ ನೇರವಾಗಿ ಶಾಲೆಗೆ ತೆರಳಿ ವಿದ್ಯಾರ್ಥಿನಿಯರಿಗೆ ನ್ಯಾಪ್ಕನ್ ಗಳನ್ನ ವಿತರಿಸುವಂತೆ ಏಜನ್ಸಿಯವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
40.50 ಕೋಟಿ ಯೋಜನೆ ಇದಾಗಿದ್ದು, ಸಂಪೂರ್ಣ ಹಣಕಾಸನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ನೆರವು ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದ ಗುಂಡೂರಾವ್, ಪ್ರಾಯೋಗಿಕವಾಗಿ ಮೆನ್ ಸ್ಟ್ರುವಲ್ ಮುಟ್ಟಿನ ಕಪ್ ಗಳನ್ನ ದಕ್ಷಿಣ ಕನ್ನಡ, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 15 ಸಾವಿರ ಮುಟ್ಟಿನ ಕಪ್ ಗಳನ್ನ ವಿತರಿಸಲಾಗಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has said that the swachhta scheme, which was stalled for four years, will be revived and napkins will be distributed to school girls from January.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm