ಬ್ರೇಕಿಂಗ್ ನ್ಯೂಸ್
05-12-23 07:41 pm HK News Desk ಕರ್ನಾಟಕ
ಬೆಳಗಾವಿ, ಡಿ.5: ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಕಡ್ಡಾಯ ಗ್ರಾಮೀಣ ಸೇವಾ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಿದ್ದಾರೆ.
ವಿಧೇಯಕದಲ್ಲಿ 'ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆ' ಎಂಬ ಪದಗಳ ಮೊದಲಿಗೆ 'ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಿದಂತೆ ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಗಳಲ್ಲಿ' ಎಂಬ ಪದಗಳನ್ನ ಸೇರಿಸುವ ಮೂಲಕ ತಿದ್ದುಪಡಿ ತರಲಾಗುತ್ತಿದೆ. ಈ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಸೇವೆಯನ್ನ ಬಳಸಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ.
ಈ ಹಿಂದೆ ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆ ಜಾರಿಗೆ ತಂದ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇತ್ತು. ಹೀಗಾಗಿ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದವರು, ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿ ಸರ್ಟಿಫಿಕೇಟ್ ಪಡೆಯಬೇಕು ಎಂಬ ನೀತಿಯನ್ನ ಸರ್ಕಾರ ಅನುಸರಿಸಿತ್ತು. ಆದರೆ ಇತ್ತೀಚೆಗೆ ವೈದ್ಯಕೀಯ ಸ್ನಾತಕೋತ್ತರ ಹಾಗೂ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತಿರ್ಣರಾಗಿ ಹೊರಬರುತ್ತಿರುವುದರಿಂದ, ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಒಂದು ವರ್ಷದ ಸೇವೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಕಡ್ಡಾಯ ಸೇವೆಯಡಿ ಕಾರ್ಯ ನಿರ್ವಹಿಸುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ಟೈಪಂಡನ್ನು ರಾಜ್ಯ ಸರ್ಕಾರವೇ ನಿರ್ಧರಿಸುವ ಅಧಿಕಾರ ಹೊಂದಿದೆ. ಅಲ್ಲದೇ ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಗೆ 3,000ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಆದರೆ, ಖಾಲಿ ಹುದ್ದೆಗಳ ಸಂಖ್ಯೆ 1,900 ಇದ್ದು, ತಿದ್ದುಪಡಿ ವಿಧೇಯಕದ ಮೂಲಕ ಕಡ್ಡಾಯ ಸೇವೆ ಖಾಲಿ ಹುದ್ದೆಗಳಿಗೆ ಸೀಮಿತಗೊಳ್ಳಲಿದೆ.
The state government has decided to exempt candidates who have completed medical courses from compulsory rural service. Health Minister Dinesh Gundu Rao has introduced an amendment bill in the Karnataka Legislative Assembly to amend the Karnataka Medical Compulsory Rural Services Act.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am