ಬ್ರೇಕಿಂಗ್ ನ್ಯೂಸ್
05-12-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.5 : ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾಗಿದ್ದ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ಮಂಗಳವಾರ ಸಂಜೆ 50 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಗಿದೆ. ಕ್ಯಾಪ್ಟನ್ ಪ್ರಾಂಜಲ್ ಮೃತದೇಹ ಬೆಂಗಳೂರಿಗೆ ತಂದಿದ್ದಾಗ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ, ನಂತರ ಆ ವಿಚಾರವನ್ನು ಮರೆತು ಬಿಟ್ಟಿದ್ದರು.
ಪರಿಹಾರ ನೀಡುವ ವಿಚಾರದಲ್ಲಿ ಮಾಧ್ಯಮ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಸಿದ್ದರಾಮಯ್ಯ ಆರಂಭದಲ್ಲಿ ಪ್ರಾಂಜಲ್ ಯಾರೆಂದೇ ಗೊತ್ತಿಲ್ಲವೆಂದು ಉಡಾಫೆ ರೀತಿಯಲ್ಲಿ ಉತ್ತರಿಸಿದ್ದರು. ಇದೇ ವಿಚಾರವನ್ನು ಪ್ರಸ್ತಾಪಿಸಿದ್ದ ಪ್ರತಿಪಕ್ಷಗಳು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದವು. ಸರ್ಕಾರದ ನಡೆಯ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಟ್ವೀಟ್ ಮಾಡಿ, ಪರಿಹಾರ ಧನವನ್ನು ಮಂಜೂರು ಮಾಡುವ ಬಗ್ಗೆ ಆದೇಶ ಹೊರಡಿಸಿದ್ದರು. ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಜಿಲ್ಲಾಧಿಕಾರಿ ದಯಾನಂದ್, ಪ್ರಾಂಜಲ್ ಅವರ ಕುಟುಂಬಕ್ಕೆ ಪತ್ನಿ ಮತ್ತು ತಾಯಿಗೆ ಸಮಾನ ಮೊತ್ತದ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ನಿರ್ದೇಶಕರಾದ ಶಶಿಧರ್ ಉಪಸ್ಥಿತರಿದ್ದರು. 25 ಲಕ್ಷ ರೂ. ಮೊತ್ತದ ಎರಡು ಚೆಕ್‌ಗಳನ್ನು ಹಸ್ತಾಂತರಿಸಲಾಗಿದೆ.
The state government on Tuesday handed over cheque of Rs 50 lakh in compensation to the family of Captain M V Pranjal, who was recently killed in an encounter with terrorists in Jammu-Kashmir's Rajouri.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm