ಬ್ರೇಕಿಂಗ್ ನ್ಯೂಸ್
07-12-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 07: ಪ್ರೀತಿಸಿದ ಹುಡುಗಿ ಏಕಾಏಕಿ ಪ್ರೀತಿಯನ್ನು ನಿರಾಕರಿಸಿ ಬಿಟ್ಟು ಹೋಗಿದ್ದಕ್ಕೆ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ.
ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ರಾಕೇಶ್ ಮೃತ ದುರ್ದೈವಿ. ರಾಕೇಶ್ ಐದಾರು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇಬ್ಬರು ಪಾರ್ಕ್, ಸಿನಿಮಾ ಎಂದು ಊರು ಊರು ತಿರುಗಿದ್ದರು. ಆದರೆ ಇತ್ತೀಚೆಗೆ ರಾಕೇಶ್‌ನನ್ನು ಯುವತಿ ಅವಾಯ್ಡ್ ಮಾಡಲು ಶುರು ಮಾಡಿದ್ದಳು.
ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದವಳು ಏಕಾಏಕಿ ದೂರಾಗಿದ್ದಳು. ಮಸೇಜ್, ಫೋನ್ ಕಾಲ್‌ಗೂ ರೆಸ್ಪಾನ್ಸ್ ಮಾಡುತ್ತಿರಲಿಲ್ಲ. ಈ ನಡುವೆ ಬೇರೆ ಯುವಕನ ಜತೆ ಮದುವೆಗೆ ಸಿದ್ಧತೆಯನ್ನು ನಡೆಸಿದ್ದಳು. ಈ ವಿಷಯ ತಿಳಿದು ನಿನ್ನೆ ಬುಧವಾರ ರಾಕೇಶ್ ನೇರ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ವೇಳೆ ರಾಕೇಶ್ ಹಾಗೂ ಯುವತಿ ನಡುವೆ ಗಲಾಟೆ ಆಗಿತ್ತು.
ಪ್ರೀತಿಸಿದವಳು ಮೋಸ ಮಾಡಿಬಿಟ್ಟಳೆಂದು ಮನನೊಂದಿದ್ದ ರಾಕೇಶ್, ಮನೆಗೆ ಬಂದವನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಗಾಯಾಳು ರಾಕೇಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಬೆಂಕಿ ತೀವ್ರತೆಗೆ ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ಬುಧವಾರ ರಾತ್ರಿಯೇ ಮೃತಪಟ್ಟಿದ್ದಾನೆ. ರಾಕೇಶ್ ಕುಟುಂಬಸ್ಥರು ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
Bangalore youth sets himself fire after lover girl ends relationship. A young man committed suicide by setting himself on fire in Bengaluru after the woman he loved decided to marry someone else, police said. The deceased man Rakesh was a resident of Kottigepalya in Kengeri locality.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm