ಬ್ರೇಕಿಂಗ್ ನ್ಯೂಸ್
14-12-23 07:45 pm HK News Desk ಕರ್ನಾಟಕ
ಬೆಳಗಾವಿ, ಡಿ 14: ಮದ್ಯಪಾನ ಪ್ರಿಯರಿಗೆ ಸರ್ಕಾರ ವಿಶೇಷ ಸವಲತ್ತುಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ಸದಸ್ಯರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. `ನಿತ್ಯ ದುಡಿ, ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ’ ಘೋಷವಾಕ್ಯದೊಂದಿಗೆ ಮದ್ಯಪಾನ ಪ್ರಿಯರು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರದ ಪರವಾಗಿ ಸಚಿವ ಸಂತೋಷ್ ಲಾಡ್ ಪ್ರತಿಭಟನಾಕಾರರ ಬೇಡಿಕೆಗಳನ್ನ ಆಲಿಸಿ, ಮನವಿ ಸ್ವೀಕರಿಸಿದ್ದಾರೆ. ಈ ವೇಳೆ ಬೇಡಿಕೆಗಳನ್ನ ಕೇಳಿ ಫುಲ್ ಸುಸ್ತಾಗಿದ್ದಾರೆ.

ಮದ್ಯಪಾನ ಪ್ರಿಯರ ಬೇಡಿಕೆಗಳು ಏನೇನು?
ಪ್ರತಿವರ್ಷ ಡಿಸೆಂಬರ್ 31ರ ದಿನವನ್ನು ಮದ್ಯಪಾನ ಪ್ರಿಯರ ದಿನವನ್ನಾಗಿ ಆಚರಣೆ ಮಾಡಬೇಕು. ಅಂದು ಎಲ್ಲಾ ರೀತಿಯ ಬಾರ್ , ರೆಸ್ಟೋರೆಂಟ್‌ನಲ್ಲಿ 50% ರಿಯಾಯಿತಿ ನೀಡಬೇಕು. ʻಕುಡುಕʼ ಎಂಬ ಪದಬಳಕೆ ನಿಷೇಧ ಮಾಡಬೇಕು, ಮದ್ಯಪಾನ ಪ್ರಿಯರ ಅಭಿವೃದ್ಧಿ ನಿಗಮ ಆರಂಭಿಸಿ 10% ಅನುದಾನ ನೀಡಬೇಕು. ಪ್ರತಿ ಬಾಟಲಿಗೆ ವಿಮೆ ನೀಡಬೇಕು, ಪ್ರತಿ ಬಾರ್ ಮುಂದೆ ಅಂಬುಲೆನ್ಸ್ ಸೇವೆ ನೀಡಬೇಕು. ಬಾರ್ ಪಕ್ಕದಲ್ಲಿ ಕುಡುಕರ ವಿಶ್ರಾಂತಿಗಾಗಿ ಭವನ ನಿರ್ಮಾಣ ಮಾಡಬೇಕು ಎಂದು ಸಂಘದ ಪ್ರಮುಖರು ಒತ್ತಾಯಿಸಿದ್ದಾರೆ.
ಮದ್ಯಪಾನ ಪ್ರಿಯರ ಆರೋಗ್ಯ ಹಾಳಾಗುತ್ತಿದೆ. ಲಿವರ್ ಸಮಸ್ಯೆಗೆ ತುತ್ತಾಗಿ ಆಸ್ಪತ್ರೆಗೆ ಬಿಲ್ ಪಾವತಿಸಲಾಗದೇ ಮರಣ ಹೊಂದುವ ಪರಿಸ್ಥಿತಿ ಬರುತ್ತಿದೆ. ಆದ್ದರಿಂದ ಆರೋಗ್ಯ ಸಮಸ್ಯೆಗಳಿಂದ ಆಗುವ ಖರ್ಚನ್ನು ಸರ್ಕಾರವೇ ಭರಿಸಬೇಕು. ಮದ್ಯಪಾನ ಪ್ರಿಯರಿಂದ ವಾರ್ಷಿಕವಾಗಿ 36,000 ಕೋಟಿ ರೂ. ಆದಾಯ ಸರ್ಕಾರಕ್ಕೆ ಬರುತ್ತಿದೆ. ಕುಡುಕರಿಗೆ ಪ್ರತ್ಯೇಕ ನಿಧಿ ಸ್ಥಾಪಿಸಿ ಆದಾಯದ 10% ಹಣವನ್ನ ನಿಧಿಗೆ ಮೀಸಲಿಡಬೇಕು. ಮದ್ಯಪಾನ ಪ್ರಿಯರು ಮೃತಪಟ್ಟ ಸಂದರ್ಭದಲ್ಲಿ 10 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
Drunkards protest for insurance and ambulance at every bar to minister Santosh Lad in Belagavi.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm