ಬ್ರೇಕಿಂಗ್ ನ್ಯೂಸ್
17-12-23 09:28 pm HK News Desk ಕರ್ನಾಟಕ
ಕೋಲಾರ, ಡಿ.17: ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಾಲೂರು ತಾಲೂಕಿನಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಹಿರಿಯ ಶಿಕ್ಷಕರ ಸಮ್ಮುಖದಲ್ಲೇ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದರಿಂದ ಮಕ್ಕಳಿಗೆ ಮೈ- ಕೈ, ಬೆನ್ನು ನೋವು ಸೇರಿದಂತೆ ಹುಷಾರಿಲ್ಲದೆ ಬಳಲುತ್ತಿದ್ದಾರೆ ಎನ್ನಲಾಗ್ತಿದೆ. ಇನ್ನು ವಸತಿ ಶಾಲೆಯ ಹಿರಿಯ ಶಿಕ್ಷಕರು ಮತ್ತು ಸಿಬ್ಬಂದಿ ತಮ್ಮನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ. ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ತಿಳಿಸಿದ್ದಾರೆ. ಅಲ್ಲದೆ, ಈ ಕುರಿತ ವಿಡಿಯೋಗಳು ವೈರಲ್ ಆಗಿವೆ. ಈ ಘಟನೆ ಬಗ್ಗೆ ಮಕ್ಕಳೇ ತಮ್ಮ ಪೋಷಕರ ಎದುರು ಅಳಲನ್ನು ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಸತಿ ಶಾಲೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಘಟನೆಯಿಂದಾಗಿ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತಮ್ಮ ಮಕ್ಕಳಿಗೆ ಕಿರುಕುಳ ನೀಡಿರುವಂತಹ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತ ಪೋಷಕರು ಒತ್ತಾಯ ಮಾಡಿದ್ದಾರೆ. ಸದ್ಯ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಮುಂದುವರಿದಿದೆ ಎಂಬ ಮಾಹಿತಿ ಸಿಕ್ಕಿದೆ.
A shocking incident of schoolchildren being made to get down into and clean a septic tank has been reported from the Morarji Desai residential school at Yeluvanahalli in Malur taluk of the district.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm