ಬ್ರೇಕಿಂಗ್ ನ್ಯೂಸ್
18-12-23 06:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 18: ನಗರದ ವಾಹನ ಸವಾರರೊಬ್ಬರು ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ವಿಧಿಸಿದ ಹಣದಲ್ಲಿ ಪ್ರಾಯಶಃ ಮೂರು ದ್ವಿಚಕ್ರ ವಾಹನಗಳನ್ನ ಕೊಂಡುಕೊಳ್ಳಬಹುದಾಗಿತ್ತು. ಅಷ್ಟರ ಮಟ್ಟಿಗೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿರುವುದು ಬೆಳಕಿಗೆ ಬಂದಿದೆ.
ಬಹುತೇಕ ಹೆಲ್ಮೆಟ್ ರಹಿತ ಚಾಲನೆ ಸೇರಿ ವಿವಿಧ ಸಂಚಾರ ನಿಯಮ ಉಲ್ಲಂಘನೆಯಡಿ ಕಳೆದ ಎರಡು ವರ್ಷಗಳಿಂದ 643 ಬಾರಿ ಟ್ರಾಫಿಕ್ ವೈಯಲೇಷನ್ ಮಾಡಿದ್ದಾರೆ. ಟ್ರಾಫಿಕ್ ವೈಯಲೇಷನ್ ಕೇಸ್ಗಳಿಂದ 643 ಪ್ರಕರಣ ದಾಖಲಾಗಿದ್ದು, 3.22 ಲಕ್ಷ ದಂಡ ವಿಧಿಸಲಾಗಿದೆ. KA04KF9072 ನಂಬರ್ನ ಸ್ಕೂಟಿಯಿಂದ ಸಂಚಾರ ನಿಯಮ ಉಲ್ಲಂಘನೆಯಾಗಿದೆ. ಗಂಗಾನಗರದ ನಿವಾಸಿಯೊಬ್ಬರ ಹೆಸರಿನಲ್ಲಿದ್ದ ದ್ವಿಚಕ್ರ ವಾಹನ ಇದಾಗಿದೆ.
ಕಳೆದ ಎರಡು ವರ್ಷಗಳಿಂದ ಇದೇ ಸ್ಕೂಟಿ ಬಳಸಿಕೊಂಡು ಬೇರೆ - ಬೇರೆ ವ್ಯಕ್ತಿಗಳು ವಾಹನ ಚಲಾಯಿಸಿ ದಂಡ ಬೀಳಲು ಕಾರಣರಾಗಿದ್ದಾರೆ. ಇತ್ತೀಚಿನ ತಿಂಗಳಲ್ಲಿ ಪೊಲೀಸರು ರಸ್ತೆಯಲ್ಲಿ ನಿಂತು ದಂಡ ವಸೂಲಿ ಅಥವಾ ಕೇಸ್ ದಾಖಲಿಸುವ ಪದ್ದತಿಗೆ ತಿಲಾಂಜಲಿ ಹಾಕಿದ್ದು, ಬದಲಾಗಿ ನಗರದ ಬಹುತೇಕ ಜಂಕ್ಷನ್ಗಳಲ್ಲಿ ಅಳವಡಿಸಿದ ಅತ್ಯಾಧುನಿಕ ಕ್ಯಾಮರಗಳಲ್ಲಿ ನಿಯಮ ಉಲ್ಲಂಘಿಸಿದವರ ಭಾವಚಿತ್ರ ಸೆರೆ ಹಿಡಿದು, ಇದರ ಆಧಾರದ ಮೇರೆಗೆ ಡಿಜಿಟಲ್ ಪ್ರಕರಣಗಳನ್ನ ದಾಖಲಿಸಿಕೊಳ್ಳಲಾಗುತ್ತಿದೆ. ಆರ್. ಟಿ ನಗರ, ತರಳುಬಾಳು ಸೇರಿ ಸುತ್ತಮುತ್ತಲಿನ ರಸ್ತೆಗಳಲ್ಲಿ 643 ಬಾರಿ ಸಂಚಾರ ನಿಯಮ ಉಲ್ಲಂಘಿಸಲಾಗಿದೆ ಎಂಬುದು ತಿಳಿದುಬಂದಿದೆ.
ತಂತ್ರಜ್ಞಾನ ಬಳಸಿ ಸಂಚಾರ ನಿಯಮ ಉಲ್ಲಂಘಿಸುತ್ತಿರುವ ವಾಹನ ಸವಾರರ ವಿರುದ್ಧ ಸಂಪರ್ಕ ರಹಿತವಾಗಿ ಪ್ರಕರಣ ದಾಖಲಿಸಿಕೊಳ್ಳುತ್ತಿರುವ ಸಂಚಾರ ಪೊಲೀಸರು ಒನ್ ವೇ ಸಂಚಾರ, ನೋ ಪಾರ್ಕಿಂಗ್, ಫುಟ್ ಪಾತ್ಗಳಲ್ಲಿ ಪಾರ್ಕಿಂಗ್ ಹಾಗೂ ಪಾದಚಾರಿ ರಸ್ತೆಗಳಲ್ಲಿ ವಾಹನ ನಿಲ್ಲಿಸಿದ್ದ ಸವಾರರ ವಿರುದ್ಧ ಕಳೆದ ಆರು ತಿಂಗಳಲ್ಲಿ 5,280 ಕ್ರಿಮಿನಲ್ ಕೇಸ್ (ಜುಲೈ 12-2023) ದಾಖಲಿಸಿಕೊಂಡಿದ್ದರು.
A motorist in the city could have bought three two-wheelers with the money he was fined for violating traffic rules. It has come to light that traffic rules have been broken to such an extent.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm