ಬ್ರೇಕಿಂಗ್ ನ್ಯೂಸ್
18-12-23 10:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.18: ರಾಜ್ಯದಲ್ಲಿ ದೊಡ್ಡ ಪ್ರಮಾಣದ ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಸಂಗತಿಯನ್ನು ಎನ್ಐಎ ಅಧಿಕಾರಿಗಳು ಪತ್ತೆ ಮಾಡಿದ್ದು, ಐಸಿಸ್ ನೆಟ್ವರ್ಕ್ ಸಂಬಂಧ ಇರಿಸಿಕೊಂಡಿದ್ದ ಎಂಟು ಮಂದಿ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ದೆಹಲಿಯ 19 ಕಡೆಗಳಲ್ಲಿ ಸೋಮವಾರ ಏಕಕಾಲದಲ್ಲಿ ಎನ್ಐಎ ದಾಳಿ ನಡೆಸಿದ್ದು, ಐಸಿಸ್ ಉಗ್ರರು ರೂಪಿಸಿದ್ದ ವಿಧ್ವಂಸಕ ಕೃತ್ಯವನ್ನು ವಿಫಲಗೊಳಿಸಿದ್ದಾರೆ. ಬಳ್ಳಾರಿಯಲ್ಲಿ ದಾಳಿ ನಡೆಸಿದ ವೇಳೆ ಶಂಕಿತ ಉಗ್ರರಾದ ಮಿನಾಜ್ ಅಲಿಯಾಸ್ ಮೊಹಮ್ಮದ್ ಸುಲೇಮಾನ್, ಸೈಯದ್ ಸಮೀರ್, ಬೆಂಗಳೂರಿನಲ್ಲಿ ಮುನಿರುದ್ದೀನ್, ಸೈಯದ್ ಸಮೀವುಲ್ಲಾ, ಮೊಹಮ್ಮದ್ ಮುಜಾಮಿಲ್ ಎಂಬವರನ್ನು ಬಂಧಿಸಲಾಗಿದೆ. ಇದೇ ವೇಳೆ, ಮುಂಬೈನಲ್ಲಿ ಅನಾಸ್ ಇಕ್ಬಾಲ್ ಶೇಖ್, ದೆಹಲಿಯಲ್ಲಿ ಶಿಯಾನ್ ರಹಿಮಾನ್ ಅಲಿಯಾಸ್ ಹುಸೇನ್ ಹಾಗೂ ಜಾರ್ಖಂಡಿನಲ್ಲಿ ಮೊಹಮ್ಮದ್ ಶಹಬಾಜ್ ಅಲಿಯಾಸ್ ಜುಲ್ಫೀಕರ್ ಅಲಿಯಾಸ್ ಗುಡ್ಡುನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಬಾಂಬ್ ತಯಾರಿಸಲು ಉಗ್ರರು ಸಂಗ್ರಹಿಸಿದ್ದ ಸಲ್ಫರ್, ಪೊಟ್ಯಾಶಿಯಂ ನೈಟ್ರೇಟ್, ಗನ್ ಪೌಡರ್, ಇದ್ದಿಲು, ಎಥೆನಾಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಇದಲ್ಲದೆ, ದಾಳಿ ಸಂದರ್ಭದಲ್ಲಿ ಇಲೆಕ್ಟ್ರಾನಿಕ್ ಉಪಕರಣಗಳು, ಸ್ಮಾರ್ಟ್ ವಾಚ್ ಗಳು, ಕೆಲವು ದಾಖಲೆಗಳನ್ನೂ ವಶಕ್ಕೆ ಪಡೆದಿದ್ದಾರೆ. ಜಿಹಾದ್, ಖಿಲಾಫತ್ ಹೆಸರಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಐಸಿಸ್ ನೆಟ್ವರ್ ಅಡಿ ತರಲು ಸಂಚು ರೂಪಿಸಿದ್ದರು. ಬಳ್ಳಾರಿಯಲ್ಲಿ ಹಲವು ಕಾಲೇಜು ವಿದ್ಯಾರ್ಥಿಗಳು ಈ ಸಂಚಿನಲ್ಲಿ ಸೇರಿಕೊಂಡಿದ್ದರು ಅನ್ನುವುದನ್ನು ಪತ್ತೆ ಮಾಡಿದ್ದಾರೆ.
ಬಳ್ಳಾರಿ ಮೂಲದ ಮಿನಾಜ್ ಅಲಿಯಾಸ್ ಮೊಹಮ್ಮದ್ ಸುಲೇಮಾನ್, ಬಳ್ಳಾರಿಯನ್ನೇ ಕೇಂದ್ರ ಸ್ಥಾನ ಮಾಡಿಕೊಂಡು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ. ಧರ್ಮದ ಹೆಸರಿನಲ್ಲಿ ಯುವಕರನ್ನು ಪ್ರಚೋದಿಸಿ ಭಯೋತ್ಪಾದನಾ ಕೃತ್ಯಕ್ಕೆ ಪ್ರೇರೇಪಣೆ ನೀಡುತ್ತಿದ್ದ. ಈತನೇ ಸ್ಫೋಟ ಸಂಚಿನ ರೂವಾರಿ ಅನ್ನುವುದನ್ನು ಎನ್ಐಎ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಐಇಡಿ ಸ್ಫೋಟಕಗಳನ್ನು ಬಳಸ್ಕೊಂಡು ಸ್ಫೋಟಕ್ಕೆ ಸಂಚು ರೂಪಿಸಿದ್ದು ಕೆಲವೇ ದಿನಗಳಲ್ಲಿ ಕೃತ್ಯ ನಡೆಸಲು ಯೋಜಿಸಿದ್ದರು ಎಂದು ಎನ್ಐಎ ಮಾಹಿತಿ ನೀಡಿದೆ.
NIA Raid in Ballari, eight arrested over link to banned organizations and ISIS, explosives seized.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm