ಬ್ರೇಕಿಂಗ್ ನ್ಯೂಸ್
20-12-23 03:34 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ಕೊರೊನಾ ಕಾಟ ಕರ್ನಾಟಕ ರಾಜ್ಯಕ್ಕೂ ಕಾಲಿಟ್ಟಿದ್ದು ಕೋವಿಡ್ ಸೋಂಕಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ತೊಂದರೆ ಇಲ್ಲ. ಆದ್ರೆ ಹೆಚ್ಚು ಜನಜಂಗುಳಿ ಇರುವ ಪ್ರದೇಶದಲ್ಲಿ ಮಾಸ್ಕ್ ಹಾಕಿದರೆ ಉತ್ತಮ ಎಂದು ಹೇಳಿದ್ದಾರೆ.
ವಿಕಾಸಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಕೋವಿಡ್ ನಿಂದ ಇದೇ ರೀತಿಯಲ್ಲಿ ಕೇರಳದಲ್ಲಿ ಐದು ಜನರ ಸಾವು ಆಗಿದೆ. ಹೃದಯ ಸಂಬಂಧಿ, ಕ್ಯಾನ್ಸರ್ ಸಮಸ್ಯೆ ಜೊತೆಗೆ ಕೋವಿಡ್ ಬಂದ ಹಿನ್ನಲೆಯಲ್ಲಿ ಸಾವು ಆಗಿದೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಒಂದು ಸಾವು ಆಗಿದೆ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವರ ಜೊತೆಗಿನ ಸಭೆಯ ಬಗ್ಗೆ ಮಾಹಿತಿ ನೀಡಿದ ಸಚಿವರು, ಕೇಂದ್ರ ಆರೋಗ್ಯ ಸಚಿವರು ಹಾಗೂ ಉನ್ನತ ಅಧಿಕಾರಿಗಳು ಹಾಗೂ ಎಲ್ಲಾ ರಾಜ್ಯದ ಆರೋಗ್ಯ ಅಧಿಕಾರಿಗಳು ಭಾಗಿಯಾಗಿದ್ದರು. ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಪರಿಸ್ಥಿತಿ ಮಾಹಿತಿ ಬಗ್ಗೆ ನೀಡಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ವೆಂಟಿಲೇಟರ್ ನಿರ್ವಹಣೆಗೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದೇವೆ. ಐಸಿಎಂಆರ್ ಫೋರ್ಟಲ್ ಡೇಟಾ ಮಾಹಿತಿ ಸಿಗುತ್ತಿಲ್ಲ. ಪೋರ್ಟಲ್ ಸರಿಪಡಿಸಲು ಮನವಿ ಮಾಡಿದ್ದೇವೆ ಎಂದರು.
ಕೋವಿಡ್ ಹಿನ್ನೆಲೆಯ ಜೆಎನ್ 1 ರೂಪಾಂತರಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಹರಡಿದೆ. ಅಮೆರಿಕ, ಯೂರೋಪ್ ರಾಷ್ಟ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಬಹಳ ವೇಗವಾಗಿ ಹರಡುವ ವೈರಾಣಾಗಿದೆ. ದೇಶದಲ್ಲಿ ಜೆ ಎನ್ 120 ಪ್ರಕರಣ ವರದಿಯಾಗಿದ್ದು ಗೋವಾದಲ್ಲಿ 18, ಮಹಾರಾಷ್ಟ್ರ ಹಾಗೂ ಕೇರಳದಲ್ಲಿ 1 ಪತ್ತೆಯಾಗಿದೆ. ಸಾರಿ ಕೇಸ್ ಗಳನ್ನು ಆರ್ ಟಿ ಪಿ ಸಿ ಆರ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಕಡ್ಡಾಯವಾಗಿ ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮಾಸ್ಕ್ ಹಾಕಲು ಸೂಚನೆ ನೀಡಲಾಗಿದೆ. ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ತೊಂದರೆ ಇಲ್ಲ. ಆದ್ರೆ ಹೆಚ್ಚು ಜನಜಂಗುಳಿ ಇರುವ ಪ್ರದೇಶದಲ್ಲಿ ಮಾಸ್ಕ್ ಹಾಕಿದರೆ ಉತ್ತಮ ಎಂದು ಸಚಿವರು ನುಡಿದರು.
ಕ್ರಿಸ್ಮಸ್, ನ್ಯೂಇಯರ್ ಸೆಲೆಬ್ರೇಷನ್‌ಗೆ ನಿರ್ಬಂಧ ಇಲ್ಲ
ಡಿಸೆಂಬರ್ 21ರ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ಜತೆ ಸಭೆ ಇದೆ. ಅದರಲ್ಲಿ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಕ್ರಿಸ್ಮಸ್ ಹಾಗೂ ನ್ಯೂಇಯರ್ ಸೆಲೆಬ್ರೇಷನ್‌ಗೆ ಸದ್ಯಕ್ಕೆ ಯಾವುದೇ ನಿರ್ಬಂಧವನ್ನು ವಿಧಿಸುವುದಿಲ್ಲ. ಮುಂದಿನ ಪರಿಸ್ಥಿತಿಯನ್ನು ಗಮನಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.
Health and Family Welfare Minister Dinesh Gundu Rao has said that one person who was infected with coronavirus has died in the state. Union Health Minister Mansukh Mandaviya today held a meeting with health ministers of all states via video conferencing. Speaking to reporters after participating in a video conference at Vikasa Soudha here today, the Minister said that a 64-year-old man died at Chamarajpet in Bengaluru.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm