ಬ್ರೇಕಿಂಗ್ ನ್ಯೂಸ್
20-12-23 06:05 pm HK News Desk ಕರ್ನಾಟಕ
ಮೈಸೂರು, ಡಿ 20: ರಸ್ತೆ ಅಪಘಾತದಲ್ಲಿ ಇಬ್ಬರು ಗೆಳೆಯರು ಮೃತಪಟ್ಟ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲೂಪುರ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.
ನಂಜನಗೂಡಿನ ತಗಡೂರು ಗ್ರಾಮದ ಶಿವಮಲ್ಲೆಗೌಡ ಎಂಬವರ ಮಗ ಮಹೇಶ್ (24) ಮತ್ತು ಅದೇ ಗ್ರಾಮದ ನಾಗರಾಜು ಎಂಬವರ ಪುತ್ರ ಮಹೇಶ್ (23) ಮೃತರೆಂದು ತಿಳಿದುಬಂದಿದೆ.
ಯುವಕರಿಬ್ಬರೂ ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ದಿನಗೂಲಿ ಕಾರ್ಮಿಕರಾಗಿದ್ದರು. ಬೆಳಿಗ್ಗೆ ಕಾರ್ಖಾನೆ ಕೆಲಸಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ಮಹೇಶ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟ್ಯಾಂಕರ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ವರುಣಾ ಕ್ಷೇತ್ರದ ಮಾಜಿ ಶಾಸಕ, ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಿಳಿಗೆರೆ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಟ್ಯಾಂಕರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಮಿಕರ ಮೃತದೇಹಗಳನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
Two friends were killed in a road accident near Mallupura village in Nanjangud taluk of the district on Wednesday morning. The deceased have been identified as Mahesh (24), son of Shivamallegowda of Tagadur village in Nanjangud and Mahesh (23), son of Nagaraju of the same village.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm