ಬ್ರೇಕಿಂಗ್ ನ್ಯೂಸ್
20-12-23 07:39 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚತ್ತುಕೊಂಡಿದ್ದು, ವಿಧಾನಸೌಧದ ಭದ್ರತೆಯ ಹೊಣೆಯನ್ನು ರಾಜ್ಯ ಪೊಲೀಸರಿಗೆ ನೀಡಲು ಮುಂದಾಗಿದೆ.
ವಿಧಾನಸೌಧ ಒಳಗಿನ ಭದ್ರತೆಯ ಜವಾಬ್ದಾರಿಯನ್ನು ಹಲವಾರು ಇಲಾಖೆಗಳು ಹೊತ್ತುಕೊಂಡಿವೆ. ಆದರೆ, ಒಂದು ವೇಳೆ ಭದ್ರತಾ ವೈಫಲ್ಯ ಎದುರಾದರೆ ಅದರ ಹೊಣೆಗಾರಿಕೆಯನ್ನು ನಿರ್ದಿಷ್ಟ ಇಲಾಖೆಯ ಮೇಲೆ ಹೊರಿಸಲು ಸಾಧ್ಯವಾಗಲ್ಲ. ಹೀಗಾಗಿ ಅಧಿವೇಶನ ಸಂದರ್ಭದಲ್ಲಿ ಭದ್ರತೆ ಹೆಚ್ಚಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಈಗಾಗಲೇ ಶಾಸಕರು ಮತ್ತು ವಿಧಾನಸೌಧಕ್ಕೆ ಭೇಟಿ ನೀಡುವವರ ಸುರಕ್ಷತೆಯ ಜವಾಬ್ದಾರಿ ಪೊಲೀಸರ ಮೇಲೆ ಇದೆ. ಹೀಗಾಗಿ ವಿಧಾನಸೌಧ ಕಟ್ಟಡದ ಒಳ ಹೊರಗಿನ ಭದ್ರತೆಯ ಹೊಣೆಯನ್ನೂ ಪೊಲೀಸರಿಗೇ ನೀಡುವ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ವಿಧಾನಸೌಧ ಹಾಗೂ ಸುತ್ತಮುತ್ತ ಹೈಟೆಕ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಇದೆ. ಕ್ಯಾಮೆರಾಗಳನ್ನು ಅಳವಡಿಸಲು 10-12 ಏಜೆನ್ಸಿಗಳು ಮುಂದೆ ಬಂದಿವೆ. ವಿಧಾನಸೌಧ ಜವಾಬ್ದಾರಿಯನ್ನು ಪೊಲೀಸ್ ಇಲಾಖೆಗೆ ನೀಡಿದಲ್ಲಿ ಪೊಲೀಸರು ಹೈಟೆಕ್ ಸೆಕ್ಯುರಿಟಿ ಗ್ಯಾಜೆಟ್‌ಗಳ ಮೇಲೆ ನಿಗಾ ಇಡುತ್ತಾರೆಂದು ತಿಳಿಸಿದ್ದಾರೆ.
ಇದಲ್ಲದೆ, ಸಂದರ್ಶಕರಿಗೆ ನೀಡುವ ಪಾಸ್‌ಗಳಿಗೆ ಅಂತಿಮ ಅನುಮೋದನೆ ನೀಡುವ ಅಧಿಕಾರವನ್ನು ಪೊಲೀಸ್ ಇಲಾಖೆಗೆ ನೀಡಲಾಗುವುದು. ಇದು ಸುರಕ್ಷತೆಯ ವಿಷಯವಾಗಿದ್ದು, ಪೊಲೀಸರಿಗೆ ಇದರ ಜವಾಬ್ದಾರಿಯನ್ನು ನೀಡಲಾಗುವುದು ಎಂದರು.
The incident of miscreants attacking the Parliament House in Bengaluru has shocked the entire nation. Following the incident, the state government has woken up and has decided to hand over the responsibility of security of vidhana soudha to the police.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm