ಬ್ರೇಕಿಂಗ್ ನ್ಯೂಸ್
25-12-23 08:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.25: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಡೆಸಿದ ಜಿನೋಮ್ ಸಿಕ್ವೇನ್ಸಿಂಗ್ ನಲ್ಲಿ ಒಮಿಕ್ರಾನ್ ವೈರಾಣು ಉಪತಳಿ JN.1 ಪತ್ತೆಯಾಗಿದೆ. ಸುಮಾರು 34 ಕೋವಿಡ್ ಸೊಂಕಿತರಿಗೆ JN.1 ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವರು, JN.1 ವೈರಾಣು ರಾಜ್ಯದಲ್ಲಿ ಇರಬಹುದು ಎಂದು ಮೊದಲೇ ನಿರೀಕ್ಷಿಸಲಾಗಿತ್ತು. ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷಾ ವರದಿ ಬಂದಿದ್ದು, ರಾಜ್ಯದಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿದೆ ಎಂದರು. ಹಾಗಂತ, ಜನರು ಕೋವಿಡ್ ಸಂಬಂಧ ಆತಂಕ ಪಡುವ ಅಗತ್ಯವಿಲ್ಲ. JN.1 ಉಪತಳಿ ಅಪಾಯಕಾರಿ ಅಲ್ಲ ಎಂಬುದನ್ನ ತಜ್ಞರು ಈಗಾಗಲೇ ಹೇಳಿದ್ದಾರೆ. ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ.

ಬಹುತೇಕ ಜೆಎನ್ 1 ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗಿವೆ. ಬೆಂಗಳೂರಿನಲ್ಲಿ - 20, ಮೈಸೂರು - 4, ಮಂಡ್ಯ - 3 ಸೇರಿದಂತೆ ರಾಮನಗರದಲ್ಲಿ - 1 ಪತ್ತೆಯಾಗಿದ್ದು, ಇಲ್ಲಿಯವರೆಗೆ ಕೋವಿಡ್ ಬಂದವರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿಯೂ JN.1 ಪಾಸಿಟಿವ್ ಇದ್ದಿದ್ದು ವರದಿಯಲ್ಲಿ ಬೆಳಕಿಗೆ ಬಂದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಸಂಬಂಧ ರಚಿಸಿರುವ ಕ್ಯಾಬಿನೆಟ್ ಉಪಸಮಿತಿ ಸಭೆ ಮಂಗಳವಾರ ನಡೆಯಲಿದೆ. ಸಭೆಯಲ್ಲಿ ಜೆ.ಎನ್ 1 ಪ್ರಕರಣ ಸೇರಿದಂತೆ, ಕೋವಿಡ್ ನಿಯಂತ್ರಣ ಹಾಗೂ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ಸದ್ಯಕ್ಕೆ ಯಾವುದೇ ಹೊಸ ನಿರ್ಬಂಧವಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರು ಮಾಸ್ಕ್ ಧರಿಸುವುದು ಉತ್ತಮ ಎಂಬುದು ನಮ್ಮ ಸಲಹೆ. ಇನ್ನು 60 ವರ್ಷ ಮೇಲ್ಪಟ್ಟವರು, ಇತರ ಕಾಯಿಲೆ ಹೊಂದಿದವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಜೆ.ಎನ್.1 ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಮಾರ್ಗಸೂಚಿ ಇಲ್ಲ. ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವ ಬಗ್ಗೆ ಚಿಂತನೆಗಳಿಲ್ಲ. ಜನ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಜಾರಿ ಮಾಡ್ತಿಲ್ಲ. ಆ ಮಟ್ಟಕ್ಕೆ ಪ್ಯಾನಿಕ್ ಆಗುವ ಅಗತ್ಯವಿಲ್ಲ. ಪಾಸಿಟಿವ್ ಬಂದವರು ಐಸೊಲೇಷನ್ ನಲ್ಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
JN1 virus in Karnataka, 34 cases found says health Minister Dinesh Gundu Rao.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm