ಬ್ರೇಕಿಂಗ್ ನ್ಯೂಸ್
27-12-23 12:33 pm HK News Desk ಕರ್ನಾಟಕ
ಮೈಸೂರು, ಡಿ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಮೈಸೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಪ್ರತಾಪ್ ಸಿಂಹ ವಿರುದ್ಧ ದೂರು ನೀಡಿದ್ದರು. ಸದ್ಯ ಈ ದೂರಿನನ್ವಯ ಪೊಲೀಸರು ಸಂಸದರ ವಿರುದ್ಧ ಎಫ್‍ಐಆರ್ (FIR) ದಾಖಲಿಸಿಕೊಂಡಿದ್ದಾರೆ.
ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ್ದ ಸಂಸದರು, ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದರು. ಸಿದ್ದರಾಮಯ್ಯ ಅವರೇ ನಿಮಗೆ ನಿಜವಾಗಲೂ ತಾಖತ್, ಧಮ್ ಇದ್ದರೆ ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ. ಆದರೆ ಈ ರೀತಿಯಾಗಿ ದ್ವೇಷದ ರಾಜಕಾರಣ ಮಾಡಬೇಡಿ ಎಂದು ಗರಂ ಆಗಿದ್ದರು.
ಸಿದ್ದರಾಮಯ್ಯ ಅವರು ಅಭದ್ರತೆಯಿಂದ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ 28 ಜನ ಸಂಸದರು ಇದ್ದಾರೆ. ಆದರೆ ಪ್ರತಾಪ್ ಸಿಂಹನ ಮಾತ್ರ ಟಾರ್ಗೆಟ್ ಮಾಡುತ್ತಾರೆ ಏಕೆ?. ನಾನು ಸೋಮಾರಿ ಸಿದ್ದನ ರೀತಿ ಸುಮ್ಮನೆ ಕುಳಿತುಕೊಂಡು ಜಾತಿ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇನೆ. ಹೀಗಾಗಿ ನಾನೇ ಟಾರ್ಗೆಟ್ ಎಂದು ಕಿಡಿಕಾರಿದ್ದರು.
ಪ್ರತಾಪ್ ಸಿಂಹ ಅವರು ಕೋಮುಗಲಭೆ ನಡೆಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ರಾತ್ರಿಯೇ ಪ್ರತಿಭಟನೆ ನಡೆಸಿದ್ದರು. ಅದರ ಬೆನ್ನಲ್ಲೇ ಪ್ರಕರಣ ದಾಖಲಾಗಿದೆ.
ಸಿದ್ದರಾಮಯ್ಯರವರು ಜಾತಿ ಜಾತಿಗಳ ನಡುವೆ ದ್ವೇಷ ಹರಡಿಸುವ ಕೆಲಸ ಮಾಡುತ್ತಿದ್ದಾರೆಂದು ಸುಳ್ಳು ಆರೋಪವನ್ನು ಮಾಡಿ, ಹಿಂದೂ ಮತ್ತು ಮುಸ್ಲಿಂಗಳ ನಡುವೆ ಕೋಮು ಗಲಭೆ ಉಂಟು ಮಾಡಲು ನಿರಂತರವಾದ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಹಿಂದೂ ಮತ್ತು ಮುಸ್ಲಿಂಮರ ನಡುವೆ ದಳ್ಳುರಿ ಸೃಷ್ಟಿಸುವ ಹೇಳಿಕೆ ನೀಡಿ ಸಾರ್ವಜನಿಕವಾಗಿ ಆಶಾಂತಿಯನ್ನು ಉಂಟು ಮಾಡುವ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಜಯ ಕುಮಾರ್ ನೀಡಿರುವ ದೂರಿನ ಮೇರೆಗೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
An FIR has been registered against Pratap Simha at Devaraja Police Station here for allegedly making derogatory remarks against Chief Minister Siddaramaiah.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm