ಬ್ರೇಕಿಂಗ್ ನ್ಯೂಸ್
29-12-23 02:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29: ಬಿಜೆಪಿ ವಿರುದ್ಧ ರೆಬೆಲ್ ಆಗಿದ್ದಲ್ಲದೆ, ದಿನಕ್ಕೊಂದು ಹೇಳಿಕೆ ಕೊಟ್ಟು ಪಕ್ಷದ ನಾಯಕರನ್ನು ಮುಜುಗರಕ್ಕೀಡು ಮಾಡುತ್ತಿರುವ ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಕಿತ್ತು ಹಾಕಲು ಸಿದ್ಧತೆ ನಡೆದಿದೆ. ಪಕ್ಷದಿಂದ ಉಚ್ಚಾಟನೆ ಮಾಡುತ್ತಾರೋ, ಅಮಾನತು ಮಾಡುತ್ತಾರೋ ಅನ್ನುವ ಕುತೂಹಲ ಇದೆ.
ಈಗಾಗಲೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮುನಿಸ್ಕೊಂಡು ಪಕ್ಷದಿಂದ ಒಂದು ಕಾಲು ಹೊರಗಿಟ್ಟಿರುವ ಯತ್ನಾಳ್, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಆಗಿರುವುದನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಆಮೂಲಕ ಆಡಳಿತ ಪಕ್ಷ ಕಾಂಗ್ರೆಸಿಗೆ ಪುಕ್ಕಟೆ ಆಹಾರ ನೀಡುತ್ತಿದ್ದು ಆ ಪಕ್ಷದತ್ತ ಹತ್ತಿರವಾಗಿರುವಂತೆ ತೋರುತ್ತಿದ್ದಾರೆ. ಬಿಜೆಪಿಯಿಂದ ಉಚ್ಚಾಟನೆ ಮಾಡುವುದು ಖಾತ್ರಿಯಾಗಿರುವುದರಿಂದ ಪಕ್ಷವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿ, ಲೋಕಸಭೆ ಚುನಾವಣೆಯಲ್ಲಿ ಸೋಲಿಸಲು ಪಣ ತೊಟ್ಟಂತೆ ಹೇಳಿಕೆ ನೀಡುತ್ತಿದ್ದಾರೆ.
ಇದೇ ವಿಚಾರದಲ್ಲಿ ಗುರುವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಚರ್ಚೆಯಾಗಿದ್ದು, ಹೆಚ್ಚಿನ ನಾಯಕರು ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಮಾಜಿ ಸಿಎಂ ಡಿವಿ ಸದಾನಂದ ಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ನಾಯಕರು ಯತ್ನಾಳ್ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಒಂದೋ ಹೈಕಮಾಂಡ್ ಗಮನಕ್ಕೆ ತಂದು ಅವರ ಬಾಯಿ ಮುಚ್ಚುವಂತೆ ಮಾಡಬೇಕು, ಇಲ್ಲವೇ ಅವರ ವಿರುದ್ಧ ಪಕ್ಷದಿಂದ ಕ್ರಮ ಕೈಗೊಳ್ಳುವ ಕೆಲಸ ಆಗಬೇಕು. ಇಲ್ಲದೇ ಹೋದರೆ ಪಕ್ಷಕ್ಕೆ ಇದರಿಂದ ತೀವ್ರ ತೊಂದರೆ ಆಗಲಿದೆ ಎಂದು ಡಿವಿಎಸ್ ಹೇಳಿದ್ದಾರೆ.
ಉಚ್ಚಾಟನೆ ಮಾಡಿದರೆ ಕಾಂಗ್ರೆಸಿಗೆ
ಪಕ್ಷದಿಂದ ಉಚ್ಚಾಟನೆ ಮಾಡಿದರೆ, ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಸೇರದಿದ್ದರೂ, ಇದೇ ರೀತಿ ವಿರೋಧಿ ಹೇಳಿಕೆ ನೀಡುತ್ತಾ ಕಾಂಗ್ರೆಸ್ ಸರಕಾರದಿಂದ ತನ್ನ ಕ್ಷೇತ್ರಕ್ಕೆ ಅನುದಾನ ತರಿಸಿಕೊಂಡು ಲಾಭ ಮಾಡಿಕೊಳ್ಳುವ ಯೋಚನೆಯಲ್ಲಿದ್ದಾರೆ. ಇದಕ್ಕಾಗಿ ತನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಿ ಎನ್ನುವ ನಿರೀಕ್ಷೆಯಲ್ಲೇ ಯತ್ನಾಳ್ ಇದ್ದಾರೆ. ಆದರೆ, ಪಕ್ಷದಿಂದ ಉಚ್ಚಾಟನೆ ಮಾಡಿದರೆ ಮತ್ತೊಂದು ಪಕ್ಷಕ್ಕೆ ಸೇರಲು ದಾರಿ ಮಾಡಿಕೊಟ್ಟಂತಾಗುತ್ತದೆ. ಅದರ ಬದಲು ಅಮಾನತು ಮಾಡಿದರೆ, ಇನ್ನೊಂದು ಪಕ್ಷಕ್ಕೂ ಸೇರಲಾಗದು. ಬಿಜೆಪಿಯಲ್ಲಿ ಇರೋದಕ್ಕೂ ಆಗದು. ಆ ರೀತಿ ಇಕ್ಕಟ್ಟಿಗೆ ಸಿಲುಕಿಸಬೇಕು ಎನ್ನುವ ಆಲೋಚನೆ ಕೆಲವರಲ್ಲಿದೆ. ಈ ಬಗ್ಗೆ ಹೈಕಮಾಂಡ್ ಅನುಮತಿ ಪಡೆದು ಕ್ರಮ ಜರುಗಿಸುವ ಯೋಚನೆಯಲ್ಲಿ ರಾಜ್ಯ ನಾಯಕರಿದ್ದಾರೆ.
ರಾಜ್ಯದಲ್ಲಿ ಲೋಕಸಭೆ ಗೆಲ್ಲುವ ಉದ್ದೇಶದಿಂದ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ಅವರಿಗೆ ಪಕ್ಷದ ಹಿಡಿತ ಬಿಟ್ಟುಕೊಟ್ಟಿರುವ ಹೈಕಮಾಂಡ್ ನಾಯಕರು, ಬಿಎಲ್ ಸಂತೋಷ್ ಮತ್ತು ತಂಡವನ್ನು ಗೌಣ ಮಾಡಿದ್ದಾರೆ. ಹೀಗಾಗಿ ಸಂತೋಷ್ ಬಣದಲ್ಲಿದ್ದವರು ಪೂರ್ತಿಯಾಗಿ ಸೈಡ್ ಲೈನ್ ಆಗಿದ್ದಾರೆ.
Vijayapura BJP MLA Basavanagouda Patil Yatnal, who is a rebel against the BJP and has been embarrassing party leaders with his statements every day, is all set to be expelled from the party. It is interesting to see whether he will be expelled from the party or suspended.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm