ಬ್ರೇಕಿಂಗ್ ನ್ಯೂಸ್
01-01-24 10:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.1: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಬಸ್ ಚಾಲಕನ ಜೊತೆ ರೈಲಿನಡಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ.
ಬಸ್ ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ನಿಗೂಢ ಸ್ಥಿತಿಯಲ್ಲಿ ಸಾವು ಕಂಡವರು. ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ನಡುವೆ, ತನ್ನ ಮಗಳನ್ನು ಪ್ರೀತಿಸುವಂತೆ ಸಂತೋಷ್ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆಯ ಪೋಷಕರು ಈ ಹಿಂದೆ ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು.
ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕೆಯನ್ನು ದೂಡಿಹಾಕಿ ಸಾವಿಗೆ ಶರಣಾಗಿದ್ದಾನೆಯೇ ಎಂಬುದು ತನಿಖೆಯಲ್ಲಿ ತಿಳಿದು ಬರಬೇಕು.
A class 8 student, who had gone to her house to go to a party with her friends, was found dead after falling under a train along with the school bus driver at Bankanakatte in Ajjampura taluk of Chikkamagaluru district.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm