ಬ್ರೇಕಿಂಗ್ ನ್ಯೂಸ್
03-01-24 04:34 pm Bangalore Correspondent ಕರ್ನಾಟಕ
ಬೆಂಗಳೂರು, ಜ.3: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ವಾಕ್ಸಮರಕ್ಕೆ ವೇದಿಕೆಯಾಗಿದೆ. ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಇದೇ ವಿಚಾರದಲ್ಲಿ ವಾಗ್ದಾಳಿ ನಡೆಸಿದ್ದು, ಕರ್ನಾಟಕದಲ್ಲಿ ಗೋಧ್ರಾ ರೀತಿ ದುರಂತ ಸಂಭವಿಸುವ ಸಾಧ್ಯತೆಯಿದೆ ಎನ್ನುವ ಮೂಲಕ ವಿವಾದಕ್ಕೆ ಕಿಚ್ಚು ಹಚ್ಚಿದ್ದಾರೆ.
ರಾಮ ಮಂದಿರ ಉದ್ಘಾಟನೆ ಅನ್ನೋದು ಧಾರ್ಮಿಕ ಕಾರ್ಯಕ್ರಮ ಆಗಿಲ್ಲ. ರಾಜಕೀಯ ಕಾರ್ಯಕ್ರಮ ಆಗುತ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿರುತ್ತಿದ್ರೆ ನಾವೆಲ್ಲ ಹೋಗುತ್ತಿದ್ದೆವು. ಶೃಂಗೇರಿ ಶಂಕರಾಚಾರ್ಯರು ಮೂಲ ಗುರುಗಳು. ಅದೇ ರೀತಿ ಧರ್ಮ ಗುರುಗಳು ಪಾಲ್ಗೊಳ್ಳುದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಮೋದಿಯ ಧರ್ಮವೇ ಇನ್ನೂ ಯಾವುದು ಅಂತ ಗೊತ್ತಾಗಿಲ್ಲ. ಅಮಿತ್ ಶಾ ಧರ್ಮವೇ ಯಾವುದೂ ಅಂತ ಗೊತ್ತಾಗಿಲ್ಲ. ಬಿಜೆಪಿಯವರೇ ಸೇರಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಇದು ಹೇಗೆ ಧಾರ್ಮಿಕ ಕಾರ್ಯಕ್ರಮ ಆಗೋದು ಎಂದು ಪ್ರಶ್ನಿಸಿದ್ದಾರೆ.

ಈ ಬಾರಿ ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು ಅನ್ನುವ ಬಗ್ಗೆ ನನಗೆ ಮಾಹಿತಿ ಸಿಗ್ತಿದೆ. ಮಾಹಿತಿ ಇದ್ದೇ ನಾನು ಹೇಳ್ತಾ ಇದ್ದೇನೆ. ಕರ್ನಾಟಕದಲ್ಲಿ ಅಂಥ ಘಟನೆ ಸೃಷ್ಟಿಸಲು ಪ್ರಚೋದನೆ ಕೊಡುತ್ತಿದ್ದಾರೆ. ಸಂಘಟನೆಯ ಕೆಲವು ಪ್ರಮುಖರೇ ಪ್ರಚೋದಿಸುತ್ತಿದ್ದಾರೆ. ಕರ್ನಾಟಕದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಬಿಕೆ ಹರಿಪ್ರಸಾದ್ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಹಳೆ ಪ್ರಕರಣದಲ್ಲಿ ಬಂಧನ ಆಗಿರುವ ಪ್ರಶ್ನೆಗೆ, ಹೋರಾಟಕ್ಕೂ ಅಪರಾಧಕ್ಕೂ ವ್ಯತ್ಯಾಸ ಇದೆ. ಕರ ಸೇವಕ ಅಂತ ಯಾವುದೋ ಅಪರಾಧ ಪ್ರಕರಣದಲ್ಲಿ ಇರುವವರನ್ನು ಬಿಟ್ಟು ಬಿಡಲು ಆಗುವುದಿಲ್ಲ. ಬಂಧಿತನ ಮೇಲೆ 13 ಕೇಸ್ ಇದೆ. ಕಾನೂನುಬಾಹಿರ ಅಪರಾಧ ಮಾಡಿದ್ದಾರೆ. ಧರ್ಮದ ಹೆಸರಲ್ಲಿ ಏನೇನು ಕೆಲಸ ಮಾಡಿದ್ದಾರೆ ಅಂತ ಗೊತ್ತಿದೆ. ಶಾಂತಿ ಕದಡುವ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲೇಬೇಕು. 30 ವರ್ಷ ಅವರನ್ನು ಬಿಟ್ಟಿದ್ದೇ ತಪ್ಪು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಆಗಬೇಕು ಎಂದು ಹರಿಪ್ರಸಾದ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಅಹಿತಕರ ಘಟನೆ ನಡೆಯೋದಕ್ಕೆ ಅವಕಾಶ ನೀಡಬಾರದು. ಅಯೋಧ್ಯೆಗೆ ಹೋಗುವವರಿಗೆ ಎಲ್ಲ ರೀತಿಯ ಬಂದೋಬಸ್ತ್ ಮಾಡಬೇಕು. ಕರ್ನಾಟಕದಲ್ಲಿ ಮತ್ತೊಂದು ಗೋಧ್ರಾ ಹತ್ಯಾಕಾಂಡ ಆಗೋದು ನೋಡೋದಕ್ಕೆ ಆಗಲ್ಲ. ನಾನು ಸಂಪೂರ್ಣ ಮಾಹಿತಿ ಜೊತೆಗೆ ಕೊಡಬಹುದು. ಕೆಲವು ಸಂಘಟನೆಗಳ ಪ್ರಮುಖರು ಕೆಲವು ರಾಜ್ಯಗಳಲ್ಲಿ ಹೋಗಿ ಸಭೆ ಮಾಡಿದ್ದಾರೆ. ಬಿಜೆಪಿಯವರು ಯಾವ ಪ್ರಚೋದನೆ ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಪ್ರಚೋದನಕಾರಿ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಮೊನ್ನೆ ಒರಿಸ್ಸಾದಲ್ಲಿ ಈ ಬಗ್ಗೆ ಮೀಟಿಂಗ್ ಆಗಿದೆ. ಕೆಲ ಸಂಘಟನೆಯವರು, ಬಿಜೆಪಿಯ ಪದಾಧಿಕಾರಿಗಳನ್ನು ಕರೆದು ಮಾತನಾಡಿದ್ದಾರೆ. ಯಾರು ಮಾತನಾಡಿದ್ದಾರೆ, ಏನು ಮಾತನಾಡಿದ್ದಾರೆ ಅನ್ನೋದನ್ನ ವಿಚಾರಿಸಿ ಎಂದು ಸರ್ಕಾರಕ್ಕೆ ಹರಿಪ್ರಸಾದ್ ಒತ್ತಾಯಿಸಿದ್ದಾರೆ.
Senior leader and Congress MLC B.K. Hariprasad has said that Godhra-like development is likely to be repeated in Karnataka, and urged the state government to ensure security of those who travel to Ayodhya in the coming days.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm