ಬ್ರೇಕಿಂಗ್ ನ್ಯೂಸ್
03-01-24 10:17 pm Bangalore Correspondent ಕರ್ನಾಟಕ
ಬೆಂಗಳೂರು, ಜ.3: ಜ.13ರಂದು ರಾಜ್ಯಾದ್ಯಂತ ಕೆ-ಸೆಟ್ ಪರೀಕ್ಷೆ ನಡೆಯಲಿದ್ದು ಹಾಜರಾಗುವ ಅಭ್ಯರ್ಥಿಗಳು //kea.kar.nic.in ಜಾಲತಾಣದಲ್ಲಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಅಲ್ಲದೆ, ಪರೀಕ್ಷೆ ದಿನ ಹೇಗಿರಬೇಕು ಮತ್ತು ಹೇಗೆ ಇರಬಾರದು ಎಂಬ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪ್ರಕಟಣೆ ನೀಡಿದ್ದಾರೆ.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ ಪ್ರವೇಶ ಪತ್ರ ಮತ್ತು ಸರಕಾರದಿಂದ ಮಾನ್ಯವಾಗಿರುವ ಗುರುತಿನ ಪತ್ರ ತೋರಿಸುವುದು ಕಡ್ಡಾಯ. ಪ್ರವೇಶ ಪತ್ರದಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರದಲ್ಲಷ್ಟೆ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಅಲ್ಲದೆ, ಇತ್ತೀಚಿನ ಎರಡು ಭಾವಚಿತ್ರಗಳನ್ನು ತರಬೇಕು ಎಂದಿದ್ದಾರೆ.
ಪರೀಕ್ಷೆ ಅಂದು ಬೆಳಗ್ಗೆ 10ರಿಂದ 11 ಮತ್ತು ಮಧ್ಯಾಹ್ನ 12ರಿಂದ 2 ಗಂಟೆಯ ವರೆಗೆ ನಡೆಯಲಿದೆ. ಇದರ ನಡುವೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಕ್ಕೆ ಹೋಗಲು ಅವಕಾಶ ಇರುವುದಿಲ್ಲ. ಓಎಂಆರ್ ಶೀಟ್ ಮೇಲೆ ಅಭ್ಯರ್ಥಿಗಳೇನಾದರೂ ತಮ್ಮ ನೋಂದಣಿ ಸಂಖ್ಯೆ, ವಿಷಯದ ಕೋಡ್ ಮತ್ತು ಪರೀಕ್ಷಾ ಕೇಂದ್ರದ ಕೋಡ್ ತಪ್ಪಾಗಿ ನಮೂದಿಸಿದಲ್ಲಿ ಅಂಥವರ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಇದಲ್ಲದೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚಿನ ಜೇಬುಗಳಿಲ್ಲದ ಸರಳ ಪ್ಯಾಂಟ್ ಧರಿಸಬೇಕು. ಜಿಪ್ ಪಾಕೆಟ್, ದೊಡ್ಡ ಬಟನ್ಸ್ ಮತ್ತು ವಿಸ್ತಾರ ಕಸೂತಿ ಇರುವ ಉಡುಪು ಮತ್ತು ಶೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಯಾವುದೇ ಕಂಠಾಭರಣ, ಕಿವಿಯೋಲೆ, ಉಂಗುರ ಮತ್ತು ಕಡಗಗಳನ್ನು ಧರಿಸಿಕೊಂಡು ಬರಬಾರದು.
ಮಹಿಳಾ ಅಭ್ಯರ್ಥಿಗಳಿಗೆ ವಿಪರೀತ ಕಸೂತಿ, ಹೂಗಳು, ಬ್ರೂಚ್, ಬಟನ್, ಪೂರ್ಣ ತೋಳಿನ ರವಿಕೆ/ವಸ್ತ್ರ ಇರುವ ಉಡುಪು ಮತ್ತು ಜೀನ್ಸ್ ಪ್ಯಾಂಟ್ ಹಾಗೂ ದಪ್ಪನೆ ಅಡಿಭಾಗದ ಚಪ್ಪಲಿ/ಶೂಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ, ಬೇರಾವುದೇ ಆಭರಣಗಳನ್ನು ಹಾಕಿ ಪರೀಕ್ಷಾ ಕೇಂದ್ರಕ್ಕೆ ಬರುವಂತಿಲ್ಲ ಎಂದು ಪ್ರಕಟಣೆ ತಿಳಿಸಿದೆ. ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬ್ಲೂ ಟೂತ್, ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ವಸ್ತುಗಳು, ಪೆನ್ ಡ್ರೈವ್, ಇಯರ್ ಫೋನ್, ಕೈ ಗಡಿಯಾರ, ಮೈಕ್ರೋಫೋನ್, ಪೆನ್ಸಿಲ್, ಎರೇಸರ್, ಜಾಮಿಟ್ರಿ ಪೆಟ್ಟಿಗೆ ಮತ್ತು ಲಾಗ್ ಟೇಬಲ್ ಇತ್ಯಾದಿಗಳನ್ನು ತರುವಂತಿಲ್ಲ. ಜತೆಗೆ ಟೋಪಿ/ಮಾಸ್ಕ್ ಹಾಕಿಯೂ ಬರುವಂತಿಲ್ಲ ಎಂದು ಸೂಚನೆ ನೀಡಿದೆ.
Karnataka Examinations Authority, KEA has released KSET 2023 admit card on January 2, 2024. The admit card for Karnataka State Eligibility Test can be downloaded by all candidates who will appear for the examination through the official website of KEA at kea.kar.nic.in.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm