ಬ್ರೇಕಿಂಗ್ ನ್ಯೂಸ್
04-01-24 03:31 pm HK NEWS ಕರ್ನಾಟಕ
ವಿಜಯಪುರ, ಜ.4: ಗೋಧ್ರಾ ಮಾದರಿಯ ಘಟನೆ ಮರುಕಳಿಸಬಹುದು ಎಂದು ಹೇಳಿಕೆ ನೀಡಿರುವವರು ಭಯೋತ್ಪಾದಕರು. ಹೇಳಿಕೆ ನೀಡಿ ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ವಾಗ್ದಾಳಿ ಕಿಡಿಕಾರಿದ್ದಾರೆ.
ಈ ರೀತಿ ಹೇಳಿಕೆ ನೀಡುವವರು ಭಯೋತ್ಪಾದಕರು. ಹೇಳಿಕೆಗಳ ಮೂಲಕ ಭಯೋತ್ಪಾದನೆ ಮಾಡಬಾರದು. ಹೇಳಿಕೆ ನೀಡಿ ಭಯ ಹುಟ್ಟಿಸುತ್ತಿದ್ದಾರೆ. ಇವರು ಯಾಕೆ ನೇರವಾಗಿ ಇಲಾಖೆಗಳಿಗೆ ಹೋಗಿ ಮಾಹಿತಿ ನೀಡ್ತಿಲ್ಲ? ಇವರು ಯಾರನ್ನ ರಕ್ಷಣೆ ಮಾಡ್ತಿದ್ದಾರೆ? ಕೇಳಿದ್ರೆ ಹೇಳ್ತೀವಿ ಅನ್ನೋದು ವಿಧ್ವಂಸಕ ಕೃತ್ಯ ನಡೆಯಲಿ ಅಂದಾಗಾಯ್ತಲ್ಲ? ಇವರು ವಿಧ್ವಂಸಕ ಕೃತ್ಯ ನಡೆಸುವವರನ್ನ ರಕ್ಷಣೆ ಮಾಡ್ತಿದ್ದಾರಾ? ಎಂದು ಪೇಜಾವರ ಶ್ರೀ ಪ್ರಶ್ನಿಸಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿ ಇರೋರು ಈ ರೀತಿ ಮಾತನಾಡಬಾರದು. ಈಗ ಭಯ ಹುಟ್ಟಿದೆ, ಈಗ ಭಯೋತ್ಪಾದಕರು ಯಾರು? ಯಾರು ಹೇಳ್ತಿದ್ದಾರೊ ಅವರು ಸ್ವತಃ ಭಯೋತ್ಪಾದಕರು. ರಾಮ ಭಕ್ತರನ್ನ ಹೆದರಿಸುವ ನೆಪದಲ್ಲಿ, ಇಡೀ ದೇಶವನ್ನೆ ಹೆದರಿಸುತ್ತಿದ್ದಾರೆ.
ಕೃತ್ಯ ನಡೆದರೆ ರಾಮಭಕ್ತರ ಮೇಲೆ ಅಷ್ಟೇ ಅಲ್ಲಾ, ಎಲ್ಲರ ಮೇಲೆ ಪರಿಣಾಮ ಬೀರುತ್ತೆ.. ತಮಗೆ ಮಾಹಿತಿ ಇದ್ದರೆ ಅದನ್ನ ಬಹಿರಂಗ ಪಡಿಸಬೇಕು. ಸಂಬಂಧಪಟ್ಟವರಿಗೆ ಹೋಗಿ ಮಾಹಿತಿ ಕೊಡಬೇಕು. ಅದನ್ನ ಬಿಟ್ಟು ಹೀಗೆ ಆಗುತ್ತೆ ಎಂದು ಭಯ ಹುಟ್ಟಿಸೋದು ಅಲ್ಲ. ಇವರು ಯಾರಿಗೆ ಅನುಕೂಲ ಮಾಡಿಕೊಡ್ತಿದ್ದಾರೆ? ರಾಮಭಕ್ತರಿಗೋ, ದುಷ್ಕರ್ಮಿಗಳಿಗೋ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಕರಸೇವಕರ ಬಂಧನ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ತಪ್ಪು ಮಾಡಿದ್ರೆ ತಪ್ಪಿತಸ್ಥರಿದ್ದರೆ ಶಿಕ್ಷೆ ಕೊಡುವುದು ಸರಿ. ಆದ್ರೆ ಇಂತಹ ಸಂದರ್ಭದಲ್ಲಿ ಈ ಘಟನೆ ನಡೆಯುತ್ತಿರುವುದು ಸರಿಯಲ್ಲ. ಇದು ತಪ್ಪು ಸಂದೇಶ ಕೊಡ್ತಾ ಇದೆ. ಹಾಗಾಗಿ ಈ ಬಗ್ಗೆ ಸರಕಾರ ಜಾಗೃತವಾಗಿ ಇರಬೇಕು ಎಂದು ಸಲಹೆ ಮಾಡಿದರು.
Godhra like incident in Karnataka is to create fear says Udupi Pejawar Mutt Seer. Karnataka Congress MLC BK Hariprasad on Wednesday alleged that the BJP was "trying to replicate the Godhra incident", in which 'kar sevaks' (Hindu volunteers) were killed, in Karnataka. He said the Congress government needed to be vigilant and provide ample security to all those who visit Ayodhya.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm