ಬ್ರೇಕಿಂಗ್ ನ್ಯೂಸ್
05-01-24 01:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.05: ಪ್ರಥಮ ವರ್ಷದ ಎಂಜಿನಿಯರ್ ವಿದ್ಯಾರ್ಥಿ ಡಬಲ್ ಬ್ಯಾರಲ್ ಬಂದೂಕಿ ನಿಂದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮುಕ್ಕೋಡ್ಲು ಗ್ರಾಮದ ಕೆ.ಡಿ.ತಿಮ್ಮಯ್ಯ ಎಂಬವರ ಪುತ್ರ ವಿಶು ಉತ್ತಪ್ಪ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಮೃತ ವಿಶು ಉತ್ತಪ್ಪ ತಂದೆ ಕೆ.ಡಿ.ತಿಮ್ಮಯ್ಯ ಕುಟುಂಬ ಸಮೇತ ಏಳು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ನೈಸ್ ರಸ್ತೆಯ ಟೋಲ್ ನಲ್ಲಿ ಸಂಗ್ರಹವಾದ ಹಣವನ್ನು ಬ್ಯಾಂಕ್‌ಗೆ ಜಮೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರಿಗೆ ವಿಶು ಉತ್ತಪ್ಪ ಒಬ್ಬನೇ ಮಗ. ಈತ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಜಿನಿಯರ್ ವ್ಯಾಸಂಗ ಮಾಡುತ್ತಿದ್ದ. ತಿಮ್ಮಯ್ಯ ಪರವಾನಗಿ ಹೊಂದಿದ್ದ ಡಬಲ್ ಬ್ಯಾರಲ್ ಬಂದೂಕು ಹೊಂದಿದ್ದು, ಕೆಲಸ ಮಾಡುವ ಸ್ಥಳಕ್ಕೆ ಬಂದೂಕು ಅಗತ್ಯವಿಲ್ಲವಾದರಿಂದ ಮನೆಯಲ್ಲೇ ಇಟ್ಟು ಹೋಗುತ್ತಿದ್ದರು.
ಸಾವಿಗೂ ಮುನ್ನ ಸಾರಿ ಎಂದು ಅಮ್ಮನಿಗೆ ಕರೆ:
ಕೆಲ ದಿನಗಳಿಂದ ವಿಶು ಉತ್ತಪ್ಪ ಅಷ್ಟಾಗಿ ಸಕ್ರಿಯವಾಗಿರಲಿಲ್ಲ. ಮನೆಯಲ್ಲೇ ಮಂಕಾಗಿದ್ದ. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ ಎಂದು ಹೇಳಲಾಗಿದೆ. ಈ ಮಧ್ಯೆ ಬುಧವಾರ ಮಧ್ಯಾಹ್ನ ತಿಮ್ಮಯ್ಯ ದಂಪತಿ ಸಾಮಾಗ್ರಿ ತರಲು ಹೊರಗಡೆ ಹೋಗಿದ್ದಾರೆ. ಕೆಲ ಸಮಯದ ಬಳಿಕ ತಾಯಿಗೆ ಕರೆ ಮಾಡಿ ಕ್ಷಮಿಸಿ ಎಂದು ಕರೆ ಮಾಡಿದ್ದಾನೆ. ಆಗ ತಾಯಿ, ಯಾವ ವಿಚಾರಕ್ಕೆ ಕ್ಷಮೆ ಕೇಳುವೆ ಎಂದು ಸಮಾಧಾನಪಡಿಸಿದ್ದಾರೆ.
ಆ ನಂತರ ತಂದೆಗೆ ಕರೆ ಮಾಡಿ, “ನಾನು ಇನ್ಮುಂದೆ ಯಾವುದೇ ತಪ್ಪು ಮಾಡುವುದಿಲ್ಲ’ ಎಂದು ಹೇಳಿ, ಕರೆ ಸ್ಥಗಿತಗೊಳಿಸಿದ್ದಾನೆ. ಆ ಬಳಿಕ ಡಬಲ್ ಬ್ಯಾರಲ್ ಬಂದೂಕಿನಿಂದ ಎಡಭಾಗದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಮಾತಿನಿಂದ ಅನುಮಾನಗೊಂಡ ಪೋಷಕರು ಕೂಡಲೇ ಮನೆಗೆ ವಾಪಸ್ ಬಂದಿದ್ದಾರೆ. ಅಷ್ಟರಲ್ಲಿ ಪುತ್ರ ವಿಶು ಉತ್ತಪ್ಪ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ಪೋಷಕರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದರು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri 19-year-old student shoots himself in Bengalore after argument with mother over studies. According to police, Vishu Uthappa, a resident of Peenya in north Bengaluru, killed himself around 4 pm on Tuesday, when his parents had gone out to buy groceries. Vishu’s father KD Thammaiah, a native of Madikeri, works as a security staffer at the NICE Road toll plaza, the police said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am