ಬ್ರೇಕಿಂಗ್ ನ್ಯೂಸ್
05-01-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಜ 05: ನನ್ನ ಮಾನ ಹಾನಿ ಮಾಡುವ ಪೋಸ್ಟ್ ಅನ್ನು ಕೂಡಲೇ ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಮಾಜಿ ಶಾಸಕ ಸಿ ಟಿ ರವಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ʼನಾನು ಕರಸೇವಕ, ನನ್ನನ್ನೂ ಬಂಧಿಸಿʼ ಎಂಬ ಬಿಜೆಪಿಯ ಅಭಿಯಾನವನ್ನು ವ್ಯಂಗ್ಯಾತ್ಮಕವಾಗಿ ಟೀಕಿಸಿದ್ದ ಕಾಂಗ್ರೆಸ್, ಸಿ ಟಿ ರವಿ ಅವರನ್ನು ಉಲ್ಲೇಖಿಸಿ ʼ ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ. ನನ್ನನ್ನೂ ಬಂಧಿಸಿʼ ಎಂಬ ಪೋಸ್ಟರ್ ಟ್ವೀಟ್ ಮಾಡಿತ್ತು.
ಇದಕ್ಕೆ ಪ್ರತಿಕ್ರಿಯಿಸಿರುವ ಸಿ ಟಿ ರವಿ, ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ. ನಾನು ಪ್ರಯಾಣಿಸುತಿದ್ದ ಕಾರು ಅಪಘಾತವಾಗಿದ್ದು ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ. ಅಂದೇ ನಿಮ್ಮ ನಾಯಕರೆಲ್ಲ ಪೋಲೀಸರ ಮೇಲೆ ಒತ್ತಡ ಹೇರಿ ಚಿಕ್ಕಮಗಳೂರು - ಬೆಂಗಳೂರು ಹೆದ್ದಾರಿಯಲ್ಲಿನ ಎಲ್ಲಾ ಟೋಲ್ ಗಳಲ್ಲಿರುವ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಯಾರು ಕಾರು ಚಾಲನೆ ಮಾಡುತ್ತಿದ್ದರು ಎಂಬುದನ್ನು ಪರಿಶೀಲನೆ ನಡೆಸಿ ನನ್ನ ಚಾಲಕ ಕಾರನ್ನು ಚಲಾಯಿಸುತ್ತಿರುವುದನ್ನು ಖಚಿತಪಡಿಸಿಕೊಂಡಿದ್ದರು ಎಂದು ಹೇಳಿದ್ದಾರೆ.
ಈ ಕಾರಣಕ್ಕೇ ನಿಮ್ಮದೇ ಸರ್ಕಾರ ಇದ್ದರೂ ಅಂದು ನನ್ನ ಮೇಲೆ ಕೇಸು ದಾಖಲಾಗಲಿಲ್ಲ. ಆದರೆ ಈಗ ನನ್ನ ಮೇಲೆ ಸುಳ್ಳು ಆರೋಪ ಮಾಡುವ, ನನ್ನ ಮಾನ ಹಾನಿ ಮಾಡುವ ಈ ಪೋಸ್ಟ್ ಕೂಡಲೇ ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ !
— C T Ravi 🇮🇳 ಸಿ ಟಿ ರವಿ (@CTRavi_BJP) January 5, 2024
ನಾನು ಪ್ರಯಾಣಿಸುತಿದ್ದ ಕಾರು ಅಪಘಾತವಾಗಿದ್ದು ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ.
ಅಂದೇ ನಿಮ್ಮ ನಾಯಕರೆಲ್ಲ ಪೋಲೀಸರ ಮೇಲೆ ಒತ್ತಡ ಹೇರಿ ಚಿಕ್ಕಮಗಳೂರು - ಬೆಂಗಳೂರು ಹೆದ್ದಾರಿಯಲ್ಲಿನ ಎಲ್ಲಾ ಟೋಲ್ ಗಳಲ್ಲಿರುವ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಯಾರು ಕಾರು ಚಾಲನೆ ಮಾಡುತ್ತಿದ್ದರು… https://t.co/CQ81zGDmaR
,@BJP4Karnataka ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು! @CTRavi_BJP ಅವರೇ, ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ? pic.twitter.com/jn3lQUm2Nn
— Karnataka Congress (@INCKarnataka) January 5, 2024
Congress tweets edited pic of CT Ravi Saying i have killed two in car accident arrest me, tweet war. Ct Ravi has asked congress to delete the tweet or else would take legal action.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm