ಬ್ರೇಕಿಂಗ್ ನ್ಯೂಸ್
05-01-24 10:12 pm Bangalore Correspondent ಕರ್ನಾಟಕ
ಬೆಂಗಳೂರು, ಜ.5: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕ ಸದಸ್ಯ ಪೀಠ, ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
ಇದೇ ವೇಳೆ, ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ. ಯತ್ನಾಳ್ ಹಾಗೂ ಸಿಬಿಐ ರಿಟ್ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಅಲ್ಲದೆ ಸಿಬಿಐ ಅರ್ಜಿ ಸಂಬಂಧ ಡಿಕೆ ಶಿವಕುಮಾರ್ಗೆ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೂಕ್ತವೆನಿಸಿದ ವಿಸ್ತೃತ ಪೀಠ ರಚಿಸಬಹುದು ಎಂದು ಏಕ ಸದಸ್ಯ ಪೀಠ ಹೇಳಿದೆ. ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್, ಸಿಬಿಐ ಹಾಗೂ ಶಾಸಕ ಯತ್ನಾಳ್ ಪರ ವಾದ ವಿರೋಧಿಸಿದರು. ಅನುಮತಿ ನೀಡಿದ ನಂತರ ಹಿಂಪಡೆಯುವಂತಿಲ್ಲವೆಂದು ಸಿಬಿಐ ವಾದ ಮಂಡಿಸಿದೆ. ಎರಡೂ ಕಡೆ ವಾದ ಆಲಿಸಿದ ಹೈಕೋರ್ಟ್, ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
The Central Bureau of Investigation (CBI) on Friday moved the High Court of Karnataka questioning the State government’s November 28, 2023, order of withdrawing consent granted to it on September 25, 2019, to probe a ₹74.93-crore disproportionate assets case registered against Deputy Chief Minister D.K. Shivakumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am