ಬ್ರೇಕಿಂಗ್ ನ್ಯೂಸ್
06-01-24 01:34 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.06: ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇತರ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಹಾಸನ ಜಿಲ್ಲೆಯ ಅರಕಲಕೂಡಿನ ಮಣಿಕಂಠ (26), ಪವನ್ (23), ಚಂದನ್ (31) ಹಾಗೂ ಹರೀಶ್ (34) ಎಂದು ಗುರುತಿಸಲಾಗಿದೆ.
ಮೊದಲು, ಬೆಂಗಳೂರಿನಿಂದ ಶಿರಡಿ ಹಾಗೂ ಗೋವಾಕ್ಕೆ ಹೊರಟಿದ್ದ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಎರಡೂ ಕಾರಿನಲ್ಲಿದ್ದ 7 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಆಗ ಇಬ್ಬರನ್ನು ಆಂಬ್ಯುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ನಾಲ್ಕು ಜನರು ರಸ್ತೆ ಪಕ್ಕದಲ್ಲಿ ಮಾತನಾಡುತ್ತ ನಿಂತಿದ್ದರು. ಈ ವೇಳೆ ಹಾವೇರಿ ಕಡೆಯಿಂದ ಬಂದ ಲಾರಿಯು ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಪಕ್ಕದಲ್ಲೇ ನಿಂತಿದ್ದ ನಾಲ್ವರೂ ತೀವ್ರ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಹಾಗೂ ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಶವಗಳನ್ನು ಕಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಕುಂದಗೋಳ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ಬಗ್ಗೆ ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸಲಾಗಿದೆ. ಬೆಳಗ್ಗೆ ಮಂಜು ಆವರಿಸಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂಬ ಸಂಶಯವಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ' ಎಂದು ಎಸ್ಪಿ ಗೋಪಾಲ್ ಬ್ಯಾಕೋಡ್ ಮಾಹಿತಿ ನೀಡಿದ್ದಾರೆ.
Hubli accident, car truck, four youths from hassan killed on spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am