ಬ್ರೇಕಿಂಗ್ ನ್ಯೂಸ್
06-01-24 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಸೂರ್ಯನ ಕುರಿತ ಅಧ್ಯಯನಕ್ಕಾಗಿ ಭಾರತದಿಂದ ಮೊದಲ ಬಾರಿಗೆ ಕಳಿಸಲ್ಪಟ್ಟಿದ್ದ ಆದಿತ್ಯ ಎಲ್- 1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ನಿಗದಿತ ಕಕ್ಷೆ ತಲುಪಿದ್ದು, ಭಾರತ ಅಂತರಿಕ್ಷ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ.
ಆದಿತ್ಯ ಎಲ್-1 ನಿಗದಿತ ಕಕ್ಷೆ ಸೇರಿದ ಬಗ್ಗೆ ಇಸ್ರೋ ಅಧಿಕೃತವಾಗಿ ಮಾಹಿತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ. 15 ಲಕ್ಷ ಕಿಮೀ ಪ್ರಯಾಣಿಸಿ ನಿಗದಿತ ಕಕ್ಷೆ ಸೇರಿದ್ದು, ಸೂರ್ಯನ ಕುರಿತ ವಿಸ್ಮಯಗಳನ್ನು ಭೂಮಿಯ ಜೊತೆಗೆ ಹಂಚಿಕೊಳ್ಳಲಿದೆ ಎಂದು ತಿಳಿಸಿದೆ. ಇಸ್ರೋ ಸಾಧನೆಯನ್ನು ಅಭಿನಂದಿಸಿರುವ ಪ್ರಧಾನಿ ಮೋದಿ, ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಇದಕ್ಕೆ ಕಾರಣವಾದ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಸೆಪ್ಟಂಬರ್ 2ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್-1 ಹೊತ್ತ ಬಾಹ್ಯಾಕಾಶ ನೌಕೆ ಗಗನಕ್ಕೆ ಹಾರಿತ್ತು. ನಾಲ್ಕು ತಿಂಗಳ ಸತತ ಯಾನದ ಬಳಿಕ 15 ಲಕ್ಷ ಕಿಮೀ ದೂರದ ಕಕ್ಷೆಯನ್ನು ತಲುಪಿದೆ. 15 ಲಕ್ಷ ಕಿಮೀ ದೂರದ ಈ ಕಕ್ಷೆ ಸೂರ್ಯ ಮತ್ತು ಭೂಮಿ ನಡುವಿನ ಒಟ್ಟು ದೂರದ ಒಂದನೇ ಭಾಗವಾಗಿದ್ದು, ಅಲ್ಲಿದ್ದುಕೊಂಡೇ ಸೂರ್ಯನ ಕುರಿತು ಅಧ್ಯಯನ ನಡೆಸಲಿದೆ. ಈ ಕಕ್ಷೆಯನ್ನು ವೈಜ್ಞಾನಿಕ ಭಾಷೆಯಲ್ಲಿ ಲ್ಯಾಂಗ್ರೇಜ್ ಪಾಯಿಂಟ್ ಎಂದು ಕರೆಯಲಾಗುತ್ತದೆ.
ಆದಿತ್ಯ ಎಲ್- 1 ಸಂಪೂರ್ಣ ದೇಶೀಯವಾಗಿ ನಿರ್ಮಿಸಲಾದ ಬಾಹ್ಯಾಕಾಶ ನೌಕೆಯಾಗಿದ್ದು, ಇದರಲ್ಲಿ ಒಟ್ಟು ಏಳು ಮಾದರಿಯ ಉಪಕರಣಗಳಿವೆ. ಸೂರ್ಯ ಬಿಡುಗಡೆಗೊಳಿಸುವ ಕಿರಣಗಳು, ಪ್ಲಾಸ್ಮಾ, ಸೌರ ಜ್ವಾಲೆಗಳ ಬಗ್ಗೆ ಅಧ್ಯಯನ ನಡೆಸಲಿದ್ದು, ಕಾಲ ಕಾಲಕ್ಕೆ ಇಸ್ರೋಗೆ ಮಾಹಿತಿ ನೀಡಲಿದೆ.
Aditya L1, the Indian Space Research Organisation's (ISRO) maiden solar mission, successfully entered its final manoeuvre to reach its destination and injected into its final orbit today.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm