ಬ್ರೇಕಿಂಗ್ ನ್ಯೂಸ್
06-01-24 08:24 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಾಗಿಗರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡಗೆ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ನಾರಾಯಣ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಕಳೆದ ಮಂಗಳವಾರ ತೀರ್ಪು ಕಾಯ್ದಿರಿಸಿತ್ತು. ಇಂದು ಕರವೇ ಅಧ್ಯಕ್ಷನಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಲಾದ ಪ್ರತಿಭಟನೆಗೆ ಸಂಬಂಧಿಸಿದಂತೆ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಜನರನ್ನು ಬಂಧಿಸಲಾಗಿದ್ದು, ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು
ಪ್ರತಿಭಟನೆ ವೇಳೆ ಕನ್ನಡಪರ ಕಾರ್ಯಕರ್ತರು ಬೃಹತ್ ಫ್ಲೆಕ್ಸ್ಗಳನ್ನು ಹರಿದು ಹಾಕಿದ್ದರು. ಬೋರ್ಡ್ಗಳನ್ನು ಒಡೆದು ಹಾಕಿದ್ದರು. ಸಾರ್ವಜನಿಕ ಅಸ್ತಿಪಾಸ್ತಿ ಹಾಳು ಮಾಡಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕರವೇ ನಾರಾಯಣ ಗೌಡ ಸೇರಿದಂತೆ 29 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಹೆದ್ದಾರಿ ತಡೆ, ಸಾರ್ವಜನಿಕ ಅಸ್ತಿ ಹಾನಿ ಮತ್ತು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮೂರು ಪ್ರಕರಣಗಳು ದಾಖಲಾಗಿದ್ದವು.
ನಾರಾಯಣ ಗೌಡ ಪರ ವಕೀಲ ಕುಮಾರ್ ಮಾತನಾಡಿ ಗೌಡ್ರು ಸೋಮವಾರ ಜೈಲಿಂದ ರಿಲೀಸ್ ಆಗೋದು ಪಕ್ಕ, ಬೇಲ್ ಅಪ್ಲಿಕೇಶನ್ ಗೆ ಸಾಕಷ್ಟು ಪ್ರೊಸೀಜರ್ಗಳು ಇರುವ ಕಾರಣ ಸೋಮವಾರ ಗೌಡ್ರು ಹಾಗೂ ಕಾರ್ಯಕರ್ತರು ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗ್ತಾರೆ ಎಂದು ತಿಳಿಸಿದ್ದಾರೆ.
Narayana Gowda finally gets bail by court, to be released from Jail on 8th of January.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm