ಬ್ರೇಕಿಂಗ್ ನ್ಯೂಸ್
10-01-24 04:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸಬೇಕೆಂಬ ವಿಚಾರದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ನಾಯಕರು ತಮ್ಮ ಪಟ್ಟು ಸಡಿಲಿಸಿದಂತೆ ಕಾಣುತ್ತಿಲ್ಲ. ದೆಹಲಿ ಹಾಗೂ ರಾಜ್ಯ ಮಟ್ಟದಲ್ಲಿ ಈ ವಿಷಯದಲ್ಲಿ ಸಾಕಷ್ಟು ಒತ್ತಡ ಹೇರುತ್ತಿರುವ ಸಚಿವ ಜಾರಕಿಹೊಳಿ ಅವರು ಲೋಕಸಭಾ ಚುನಾವಣೆ ದೃಷ್ಟಿಯಿಂದ ಲಿಂಗಾಯತರು, ಪ.ಜಾತಿ ಹಾಗೂ ಪಂಗಡದವರಿಗೆ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕೆಂದು ಪ್ರತಿಪಾದಿಸುತ್ತ ಬಂದಿದ್ದಾರೆ.
ಸೋಮವಾರ ರಾತ್ರಿ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಡಿಸಿಎಂ ಹುದ್ದೆ ಸೃಷ್ಟಿ ಮತ್ತು ಜಾತಿ ಪ್ರಾತಿನಿಧ್ಯ ನೀಡುವ ಅಗತ್ಯವನ್ನು ಮನದಟ್ಟು ಮಾಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಸತೀಶ್ ಜಾರಕಿಹೊಳಿ, “ನಮ್ಮ ವಿಚಾರಗಳನ್ನು ಪ್ರಧಾನ ಕಾರ್ಯದರ್ಶಿಗಳಿಗೆ ಹೇಳಿದ್ದೇವೆ. ಬುಧವಾರ ಬೆಂಗಳೂರಿನಲ್ಲಿ ಸಭೆ ಇದೆ. ಜ.11ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಸುರ್ಜೇವಾಲ ಭೇಟಿ ವೇಳೆಯೂ ಡಿಸಿಎಂ ಹುದ್ದೆ ಬಗ್ಗೆ ಪ್ರಸ್ತಾಪಿಸಿದ್ದೇವೆ. ಪ್ರಬಲ ಜಾತಿಗಳಿಗೆ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದಿದ್ದಾರೆ.

ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಲವು ಹಿರಿಯ ಸಚಿವರಿಗೆ ಫೋನ್ ಮಾಡಿ ಎಚ್ಚರಿಕೆ ನೀಡಿದ್ದಾರೆ. ಸಚಿವರಾದ ಡಾ.ಪರಮೇಶ್ವರ್, ದಿನೇಶ್ ಗುಂಡೂರಾವ್, ಕೆ.ಎಚ್.ಮುನಿಯಪ್ಪ, ಕೆ.ಎನ್. ರಾಜಣ್ಣ ಅವರಿಗೆ ದೂರವಾಣಿ ಕರಡ ಮಾಡಿ, ಡಿಸಿಎಂ ವಿಚಾರವನ್ನು ಪದೇ ಪದೆ ಪ್ರಸ್ತಾಪಿಸಬೇಡಿ ಎಂದು ಎಚ್ಚರಿಸಿದ್ದಾರೆ ಎನ್ನಲಾಗಿದೆ.
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಈ ರೀತಿಯ ಗೊಂದಲ ಎಬ್ಬಿಸಬಾರದು. ಆಗಾಗ್ಗೆ ಡಿಸಿಎಂ ಹುದ್ದೆ ಬಗ್ಗೆ ಪ್ರಸ್ತಾಪ ಮಾಡುವ ಮೂಲಕ ಗೊಂದಲ ಸೃಷ್ಟಿಸುವುದು ಸರಿ ಅಲ್ಲ. ಸರ್ಕಾರ ಐದೂ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಅವುಗಳನ್ನು ಮುಂದಿಟ್ಟು ಜನರ ಮನ ಗೆಲ್ಲಬೇಕು ಎಂದು ವೇಣುಗೋಪಾಲ್ ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
Some leaders, including PwD Minister Satish Jarkiholi, do not seem to have relented on the issue of creating three deputy chief ministers' posts in the state government ahead of the Lok Sabha elections. Jarkiholi, who has been putting a lot of pressure on the issue at the Delhi and state levels, has been advocating the creation of three deputy CM posts for Lingayats, SCs and STs in view of the Lok Sabha elections.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am