ಬ್ರೇಕಿಂಗ್ ನ್ಯೂಸ್
22-01-24 05:55 pm HK News Desk ಕರ್ನಾಟಕ
ಶಿವಮೊಗ್ಗ, ಜ 22: ರಾಮಜನ್ಮಭೂಮಿ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠಾಪನಾ ಕಾರ್ಯವು ಅದ್ಧೂರಿಯಾಗಿ ನೆರವೇರಿದೆ.
ಈ ಖುಷಿಯ ಸಂದರ್ಭದಲ್ಲಿ ಶಿವಮೊಗ್ಗ ನಗರದ ಶಿವಪ್ಪನಾಯಕ ಸರ್ಕಲ್‌ನಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ಮುಸ್ಲಿಂ ಮಹಿಳೆ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಮಹಿಳೆ ಅಲ್ಲಾ ಹು ಅಕ್ಬರ್ ಎಂದು ಕೂಗಿರುವ ಘಟನೆ ನಡೆದಿದೆ.
ನಗರದ ಶಿವಪ್ಪನಾಯಕ ಸರ್ಕಲ್‌ನಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಸಿಹಿ ಹಂಚುತ್ತಿದ್ದರು. ಈ ವೇಳೆ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ವೇಳೆ ಮುಂದು ಹೋಗುವಂತೆ ಶ್ರೀರಾಮನ ಭಕ್ತರು ಎಲ್ಲರಿಗೂ ಹೇಳುತ್ತಾ ಬಂದಿದ್ದಾರೆ. ಆಗ ಅಲ್ಲಿದ್ದ ಮುಸ್ಲಿಂ ಮಹಿಳೆಯೊಬ್ಬರು ಆಕ್ರೋಶಗೊಂಡಿದ್ದು, ನನ್ನನ್ನೇಕೆ ತಡೆಯುತ್ತೀರಿ? ಹೇ.. ನಿಮ್ಮ ಪ್ರಧಾನಿ ನರೇಂದ್ರ ಮೋದಿ ಏನು ಮಾಡಿದ್ದಾನೆ? ಎಂದು ಆಕ್ರೋಶವನ್ನು ವ್ಯಕ್ತಪಡಿಸಿದಳು. ಇದು ಆಕ್ರೋಶಕ್ಕೆ ಕಾರಣವಾಯಿತು.


ಅಲ್ಲದೆ, ಇದೇ ವೇಳೆ ಆ ಮಹಿಳೆ ಅಲ್ಲಾ ಹು ಅಕ್ಬರ್ ಎಂದು ಕೂಗಿದ್ದಾಳೆ. ಆಕೆ ಹೀಗೆ ಕೂಗುತ್ತಿದ್ದಂತೆ ರೊಚ್ಚಿಗೆದ್ದ ಶ್ರೀರಾಮ ಸೇನೆ ಕಾರ್ಯಕರ್ತರು, “ಜೈ ಶ್ರೀರಾಮ್” ಎಂದು ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗುತ್ತಿದ್ದಂತೆ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡರು.
ಘೋಷಣೆ ಕೂಗಿದ ಮಹಿಳೆಗೆ ಮಾನಸಿಕ ಸ್ಥಿಮಿತತೆ ಇರಲಿಲ್ಲ, ಕುಟುಂಬದವರ ಹೇಳಿಕೆ ; ಎಸ್ಪಿ
'ಅಲ್ಲಾ ಹು ಅಕ್ಬರ್' ಎಂದು ಘೋಷಣೆ ಕೂಗಿದ ಮಹಿಳೆಗೆ ಮಾನಸಿಕ ಸ್ಥೀಮಿತ ಇಲ್ಲ ಎಂದು ಆಕೆಯ ತಂದೆ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಮಾನಸಿಕ ಸ್ಥೀಮಿತತೆ ಇಲ್ಲದ ಕಾರಣಕ್ಕೆ ಆಕೆ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ ಎಂದು ಆಕೆಯ ಕುಟುಂಬದವರು ತಿಳಿಸಿದ್ದು, ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Tension prevailed for a while near Shivappa Nayaka circle on Monday when a 25-year-old Muslim woman, said to be mentally unstable, raised 'Allahu Akbar' slogans when activists of Hindu organisations were distributing sweets to people to mark the inauguration of Ram Mandir in Ayodhya in Uttar Pradesh.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am