ಬ್ರೇಕಿಂಗ್ ನ್ಯೂಸ್
23-01-24 10:54 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಅಸ್ಸಾಂನ ಗುವಾಹಟಿಯಲ್ಲಿ ತಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಿಜೆಪಿಯ ಗೂಂಡಾಗಳು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದಿರುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರದ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿರುವುದಾಗಿ ಆರೋಪಿಸಿದ್ದಾರೆ.
ಬಿಜೆಪಿಯವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ.
ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ, ಶಿವಕುಮಾರ ಹೆಸರಲ್ಲಿ ಶಿವ ಹಾಗೂ ಷಣ್ಮುಗ ಇದ್ದಾರೆ. ಹರಿಪ್ರಸಾದ್ ಅವರ ಹೆಸರಲ್ಲಿ ಹರಿ ಇದ್ದಾನೆ. ಕೃಷ್ಣ ಭೈರೇಗೌಡರ ಹೆಸರಲ್ಲಿ ಕೃಷ್ಣ ಇದ್ದಾನೆ. ಹಿಂದೂ ಧರ್ಮ ನಿಮ್ಮ ಮನೆ ಆಸ್ತಿಯೇ ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ನೂರಾದರೂ ಭಕ್ತಿವೊಂದೇ, ಕರ್ಮ ಹಲವಾದರೂ ನಿಷ್ಠೆವೊಂದೇ, ದೇವನೊಬ್ಬ ನಾಮ ಹಲವು. ನಾವು ಕಲ್ಲು, ನೀರು, ಮರ, ಗಾಳಿಯಲ್ಲಿ ದೇವರನ್ನು ಕಾಣುತ್ತೇವೆ. ನಮ್ಮ ಸರ್ಕಾರದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಹಜ್ ಸಮಿತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಇದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿದೆ. ಹೀಗಾಗಿ ಅವರ ಯಾತ್ರೆಯನ್ನು ತಡೆಯುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.
D K Shivakumar slams BJP for stopping Rahul Gandhi Bharat Jodo Nyay Yatra. The Rahul Gandhi-led Bharat Jodo Nyay Yatra was stopped from entering Guwahati city on Tuesday, triggering protests from Congress workers who broke barricades and raised slogans
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm